ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ; ಯುಪಿಯಲ್ಲಿ ವರುಣ ಅಬ್ಬರಕ್ಕೆ 9 ಮಂದಿ ಬಲಿ

ಬೆಂಗಳುರು: ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿದೆ. ಈ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಉತ್ತರ ಪ್ರದೇಶ, ದೆಹಲಿಯಲ್ಲಿ ಭಾರಿ ಮಳೆ ಆಗ್ತಿದ್ದು ಹಲವು ಪ್ರದೇಶಗಳಲ್ಲಿ ಪ್ರವಾಹ ಸನ್ನಿವೇಶ ನಿರ್ಮಾಣವಾಗಿದೆ. ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಭಾನುವಾರ ವ್ಯಾಪಕ ಮಳೆಯಾಗಿದ್ದು, ಮಳೆ ಸಂಬಂಧಿ ಅನಾಹುತಗಳಿಂದ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.

Edited By : Vijay Kumar
PublicNext

PublicNext

10/10/2022 08:28 am

Cinque Terre

31.87 K

Cinque Terre

0

ಸಂಬಂಧಿತ ಸುದ್ದಿ