ನವದೆಹಲಿ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ನಡೆದ ಪ್ರತ್ಯೇಕ ಎನ್ಕೌಂಟರ್ ಗಳಲ್ಲಿ ನಾಲ್ಕು ಮಂದಿ ಉಗ್ರರನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿವೆ.
ದಕ್ಷಿಣ ಕಾಶ್ಮೀರದಲ್ಲಿ ಸೇನಾಪಡೆ ಮತ್ತು ಪೊಲೀಸರು ಜಂಟಿಯಾಗಿ ನಡೆಸಿದ ಎರಡೂ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನ ಹೊಡೆದುರುಳಿಸಲಾಗಿದೆ.
ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಪಾಕ್ ಉಗ್ರರನ್ನ ಇಂದು ಬೆಳಗ್ಗೆ ಕುಲ್ಗಾಮ್ ಜಿಲ್ಲೆಯಲ್ಲಿ ಹೊಡೆದುರುಳಿಸಲಾಗಿದೆ.
ಇನ್ನೆರಡು ಉಗ್ರರನ್ನ ಮಧ್ಯಾಹ್ನ ಪುಲ್ಪಾಮಾ ಜಿಲ್ಲೆಯಲ್ಲಿ ಸೆದೆಬಡಿಯಲಾಗಿದೆ.
ಪ್ರಸ್ತುತ ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿರುವುದಾಗಿ ತಿಳಿದುಬಂದಿದೆ.
PublicNext
10/10/2020 09:23 pm