ಶಿವಮೊಗ್ಗ: ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಹಿಡ್ಲಮನೆ ಜಲಪಾತದ 80 ಅಡಿಗಳ ಎತ್ತರದಲ್ಲಿ ಸಿಲುಕಿಕೊಂಡಿದ್ದ ವೈದ್ಯಕೀಯ ವಿದ್ಯಾರ್ಥಿಯನ್ನು ರಕ್ಷಣೆ ಮಾಡಲಾಗಿದೆ.
ಹಾಸನ ಮೂಲದ ಅಮೋಘ, ತಮಿಳುನಾಡು ಮೂಲದ ಸಂಜೀವ್, ಜೈಪುರ ಮೂಲದ ಮಧು ಎಂಬವರು ಕೊಡಚಾದ್ರಿ ಪ್ರವಾಸಕ್ಕೆ ಶನಿವಾರ ರಾತ್ರಿ ಬಂದು ಹೋಂಸ್ಟೇಯಲ್ಲಿ ತಂಗಿದ್ದರು. ಭಾನುವಾರ ಬೆಳಗ್ಗೆ ಜೀಪ್‍ನಲ್ಲಿ ಕೊಡಚಾದ್ರಿ ಗಿರಿ ಹತ್ತಿದ ಮೂವರು ನಂತರ ನೇರವಾಗಿ ಹಿಡ್ಲಮನೆ ಜಲಪಾತಕ್ಕೆ ತೆರಳಿದ್ದರು. ಮೂವರು ಫಾಲ್ಸ್ ಕೆಳಗಿನಿಂದ ಮೇಲ್ಭಾಗಕ್ಕೆ ತೆರಳಿದ್ದರು. ಆದರೆ ಫಾಲ್ಸ್‌ನ ಪಕ್ಕದಲ್ಲೇ ಕೆಳಗಿಳಿಯಲು ಹೋದ ಅಮೋಘ ಅಲ್ಲಿಯೇ ಸಿಲುಕಿಕೊಂಡಿದ್ದರು. ಇನ್ನಿಬ್ಬರು ಬೇರೆ ಮಾರ್ಗದಿಂದ ಕೆಳಗೆ ಇಳಿದು ಬಂದಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಮತ್ತು ವನ್ಯಜೀವಿ ಇಲಾಖೆಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳೀಯರ ಸಹಕಾರದಿಂದ ಹಗ್ಗವನ್ನು ಬಳಸಿ ಅಪಾಯದಲ್ಲಿ ಸಿಲುಕಿದ್ದ ಅಮೋಘನನ್ನು 5 ಗಂಟೆ ಕಾರ್ಯಾಚರಣೆ ಬಳಿಕ ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ.
PublicNext
19/10/2020 09:37 pm