ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಉಗ್ರರ ಇರುವಿಕೆಯ ಖಚಿತ ಮಾಹಿತಿ ಪಡೆದ ಸುರಕ್ಷಾ ಪಡೆ ಯೋಧರು ಬುಡ್ಗಾಮ್ ಜಿಲ್ಲೆಯ ಚಾದೂರಾ ಪ್ರದೇಶದ ಮೋಚ್ವಾದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಸಿಕ್ಕ ನಂತರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.
ಈ ವೇಳೆ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದರು. ಉಗ್ರರು ಅಡಗಿರೋ ಪ್ರದೇಶ ಸುತ್ತುವರೆದು ಭಾರತೀಯ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿದೆ.
ಈ ದಾಳಿಯಲ್ಲಿ ಇಬ್ಬರುಉಗ್ರರ ಎನ್ ಕೌಂಟರ್ ಆಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.
ಇನ್ನೂ ಇವರು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂಬಿತ್ಯಾದಿ ವಿವರಗಳು ಇನ್ನಷ್ಟೇ ಬಹಿರಂಗವಾಗಬೇಕಿದೆ.
PublicNext
28/10/2020 08:40 am