ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುತ್ತಿನ ನಗರಿಗೆ ಬಸ್ ಸೇವೆ ಆರಂಭ

ಬೆಂಗಳೂರು : ಮುತ್ತಿನ ನಗರಿ ಹೈದರಾಬಾದ್ ಗೆ ಕೊರೊನಾ ಲಾಕ್ ಡೌನ್ ಘೋಷಣೆಯಾದ ಬಳಿಕ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಸದ್ಯ ಎಲ್ಲವೂ ಸಹಜ ಸ್ಥಿಗೆ ಮರಳುತ್ತಿದ್ದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ) ಹೈದರಾಬಾದ್ ಗೆ ಬಸ್ ಸಂಚಾರವನ್ನು ಆರಂಭಿಸಿದೆ.

ಲಾಕ್ ಡೌನ್ ಸಡಿಲಗೊಂಡಿರುವ ಹಿನ್ನಲೆಯಲ್ಲಿ ಅಂತರರಾಜ್ಯ ಬಸ್ ಗಳ ಸಂಚಾರವನ್ನು ಆರಂಭಿಸಲಾಗಿದೆ.

ನವೆಂಬರ್ 3ರ ಮಂಗಳವಾರದಿಂದ ಬೆಂಗಳೂರು ಮತ್ತು ಮೈಸೂರಿನಿಂದ ತೆಲಂಗಾಣ ರಾಜ್ಯದ ಹೈದರಾಬಾದ್ ಗೆ ಬಸ್ ಸೇವೆ ಆರಂಭಿಸಲಾಗಿದೆ.

ಎರಡೂ ನಗರಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಸ್ ಗಳನ್ನು ಸಂಚರಿಸಲಿವೆ.

ಇನ್ನು ಬಸ್ ನಲ್ಲಿ ಸಂಚರಿಸುವ ಜನ ಕಡ್ಡಾಯವಾಗಿ ಕೊರೊನಾ ನಿಯಮಗಳನ್ನು ಪಾಲಿಸಲೇಬೇಕು ಎಂದು ಕೆಎಸ್ ಆರ್ ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಯಾಣಿಕರು ಕೆಎಸ್ ಆರ್ ಟಿಸಿ ವೆಬ್ ಸೈಟ್ ಮೂಲಕ ಮುಂಗಡ ಟಿಕೆಟ್ ಬುಕ್ ಮಾಡಬಹುದು ಎಂದು ತಿಳಿಸಲಾಗಿದೆ.

Edited By : Nirmala Aralikatti
PublicNext

PublicNext

03/11/2020 09:03 am

Cinque Terre

59.16 K

Cinque Terre

0