ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸದನವಾಯ್ತು ಸಂತೆ ವಿರೋಧದ ನಡುವೆ ಜಾರಿ ಆಯ್ತು ಕೃಷಿ ಮಸೂದೆ

ನವದೆಹಲಿ : ಪ್ರತಿಪಕ್ಷಗಳ ತೀವ್ರ ವಿರೋಧ ಮತ್ತು ಗದ್ದಲದ ನಡುವೆ ಕೃಷಿ ಸಂಬಂಧಿತ ಮೂರು ಮಸೂದೆಗಳ ಪೈಕಿ ಎರಡು ಮಸೂದೆಗಳನ್ನು ರಾಜ್ಯಸಭೆಯಲ್ಲಿ ಧ್ವನಿ ಮತದ ಮೂಲಕ ಭಾನುವಾರ ಅಂಗೀಕರಿಸಲಾಯಿತು.

ಕೃಷಿಗೆ ಸಂಬಂಧಿಸಿದ ಎರಡು ಪ್ರಮುಖ ಮಸೂದೆಗಳನ್ನು ವಿರೋಧಿಸಿದ್ದ ಪ್ರತಿ ಪಕ್ಷಗಳು ಸದನದಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದವು.

ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೂ ಧ್ವನಿ ಮತದ ಮೂಲಕ ಮಸೂದೆಗಳನ್ನು ಅಂಗೀಕರಿಸಬೇಕು ಎಂದು ಉಪ ಸಭಾಪತಿ ಹರಿವಂಶ್ ಸೂಚಿಸಿದ್ದರು.

ಆ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ವಿರೋಧ ಪಕ್ಷಗಳು ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿವೆ.

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನ ಹಿರಿಯ ಸಂಸದ ಅಹ್ಮದ್ ಪಟೇಲ್, 'ಈ ದಿನವು ಇತಿಹಾಸದಲ್ಲಿ ಕಪ್ಪು ದಿನವೆಂದು ಗುರುತಿಸ್ಪಡುತ್ತದೆ.

ಈ ಮಸೂದೆಗಳನ್ನು ಅಂಗೀಕರಿಸಿದ ವಿಧಾನವು ಪ್ರಜಾಪ್ರಭುತ್ವ ಪ್ರಕ್ರಿಯೆಗಳಿಗೆ ವಿರುದ್ಧವಾಗಿದೆ.

ಇದರಿಂದ ಪ್ರಜಾಪ್ರಭುತ್ವದ ಹತ್ಯೆಯಾಗಿದೆ. 12 ವಿರೋಧ ಪಕ್ಷಗಳು ರಾಜ್ಯಸಭೆಯ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿವೆ' ಎಂದು ಸ್ಪಷ್ಟಪಡಿಸಿದ್ದಾರೆ.

ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, ಬೆಲೆ ಖಾತರಿ ಮತ್ತು ಕೃಷಿ ಸೇವೆಗಳಿಗೆ ರೈತರ ಒಪ್ಪಿಗೆ (ಸಬಲೀಕರಣ ಮತ್ತು ರಕ್ಷಣೆ) ಮಸೂದೆಗಳನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ.

Edited By : Nirmala Aralikatti
PublicNext

PublicNext

20/09/2020 08:56 pm

Cinque Terre

81.49 K

Cinque Terre

1