ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ದೇವಿರಮ್ಮ ಬೆಟ್ಟ ಏರಲು ನಿಷೇಧ; ಜಿಲ್ಲಾಧಿಕಾರಿ

ಚಿಕ್ಕಮಗಳೂರು: ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗ ದೇವಿರಮ್ಮನವರ ದೀಪೋತ್ಸವ ನ.13ರಿಂದ 17ರ ವರೆಗೆ ನಡೆಯಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಉತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.

ಭಕ್ತರು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ರಾಜ್ಯ ಸರಕಾರದ ಮಾರ್ಗಸೂಚಿಯಂತೆ ನ.14ರಂದು ದೇವಿರಮ್ಮ ಬೆಟ್ಟಕ್ಕೆ ಸಾರ್ವಜನಿಕರು ಏರುವುದನ್ನು ಈ ವರ್ಷ ಮುಂದೂಡಲಾಗಿದೆ. ದೇವಿರಮ್ಮನವರ ಬೆಟ್ಟ ಅತ್ಯಂತ ಕಡಿದಾಗಿದ್ದು, ಬೆಟ್ಟಕ್ಕೆ ಹತ್ತುವ ಮಾರ್ಗಗಳು ತುಂಬಾ ಕಿರಿದಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಾ ದಿಗಳು ಆಗಮಿಸುವುದರಿಂದ ಬೆಟ್ಟಕ್ಕೆ ಹತ್ತುವ ಈ ಸಂದರ್ಭ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟ ಸಾಧ್ಯವಿದ್ದು, ಕೊರೊನಾ ಹರಡುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ದೇವಿರಮ್ಮ ಬೆಟ್ಟಕ್ಕೆ ಸಾರ್ವಜನಿಕರು ಏರುವುದನ್ನು ಈ ವರ್ಷ ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Vijay Kumar
PublicNext

PublicNext

10/11/2020 08:37 pm

Cinque Terre

35.85 K

Cinque Terre

1