ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಸಂಕ್ರಾಂತಿಯಿಂದ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಅಭಿಯಾನ ಶುರು'

ನವದೆಹಲಿ: ಸಂಕ್ರಾಂತಿಯ ದಿನದಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ‌ ಸಂಗ್ರಹಿಸಲು ವಿಶೇಷ ಅಭಿಯಾನ ಆರಂಭಿಸಲಾಗುತ್ತದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ‌ ಸ್ವಾಮೀಜಿ ತಿಳಿಸಿದ್ದಾರೆ.

ನವದೆಹಲಿಯ ವಸಂತಕುಂಜ್ ಪ್ರದೇಶದಲ್ಲಿರುವ ಪೇಜಾವರ ಮಠದ ಶಾಖೆಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರತಿಯೊಬ್ಬ ಭಕ್ತ ಕನಿಷ್ಠ 10 ರೂ. ದೇಣಿಗೆ‌ ನೀಡುವಂತೆ ಮನವಿ ಮಾಡಲಾಗಿದೆ. ಪ್ರತಿ ಕುಟುಂಬ ಕನಿಷ್ಠ ‌100 ರೂ. ನೀಡಿ ರಸೀದಿ ಪಡೆಯುವ ಮೂಲಕ ಭಾರತೀಯ ಸಂಸ್ಕೃತಿ, ಪರಂಪರೆಯ ಪ್ರತೀಕವಾಗಿರುವ ಮಂದಿರ ‌ನಿರ್ಮಾಣಕ್ಕೆ ನೆರವು ನೀಡಬೇಕು ಎಂದು ಮನವಿ ಮಾಡಿಕೊಂಡ ಶ್ರೀಗಳು, ಸತತ 45 ದಿನಗಳ ಕಾಲ ವಿಶ್ವದಾದ್ಯಂತ ದೇಣಿಗೆ ಸಂಗ್ರಹ ಅಭಿಯಾನ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Edited By : Vijay Kumar
PublicNext

PublicNext

11/11/2020 03:41 pm

Cinque Terre

33.2 K

Cinque Terre

2