ರಾಮನಗರ: ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಾರ್ಖಾನೆ ಹಾಗೂ ಕಾರ್ಮಿಕರ ನಡುವಿನ ಬಿಕ್ಕಟ್ಟು ಮುಂದುವರಿದಿದೆ. ಇಂದು ಕೂಡ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಕಾರ್ಮಿಕರು ದಿಢೀರ್ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾರ್ಖಾನೆ ಆಡಳಿತ ಮಂಡಳಿಯು ಮಂಗಳವಾರ ಲಾಕ್‌ಔಟ್ ಘೋಷಣೆ ಮಾಡಿತ್ತು. ಮತ್ತೊಂದೆಡೆ ಕಾರ್ಮಿಕರ ಸಂಘ ಸಹ ತನ್ನ ಬಿಗಿಪಟ್ಟು ಮುಂದುವರಿಸಿದೆ. ಲಾಕ್‌ಔಟ್ ತೆರವುಗೊಳಿಸಬೇಕು, ಸಿಬ್ಬಂದಿಯೊಬ್ಬರ ಅಮಾನತು ಆದೇಶ ಹಿಂಪಡೆಯಬೇಕು ಎನ್ನುವುದು ಸೇರಿದಂತೆ ತಮ್ಮ ಬೇಡಿಕೆಗಳೂ ಈಡೇರುವವರೆಗೂ ಮುಷ್ಕರ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದೆ.
PublicNext
11/11/2020 08:11 pm