ಶ್ರೀನಗರ: ಜಮ್ಮುವಿನ ನಾಗ್ರೋಟಾದಲ್ಲಿ ಇಂದು ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಯು ನಾಲ್ವರು ಉಗ್ರರನ್ನು ಗುಂಡಿಕ್ಕಿ ಹತ್ಯೆಗೈದಿದೆ.
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಾಗ್ರೋಟಾದ ಬನ್ ಟೋಲ್ ಪ್ಲಾಜಾ ಬಳಿ ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಗಿತ್ತು. ಈ ವೇಳೆ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದು, ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೆಲ ಉಗ್ರರು ವಾಹನದಲ್ಲಿ ಅಡಗಿ ಕುಳಿತಿದ್ದಾರೆ. ಹೀಗಾಗಿ ಕಾರ್ಯಾಚರಣೆ ಮುಂದುವರೆದಿದ್ದು, ಈ ಪ್ರದೇಶದಲ್ಲಿ ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
PublicNext
19/11/2020 10:12 am