ಬೆಂಗಳೂರು: ಕನ್ನಡದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ, ಬಿಸಿ ಮುಟ್ಟಿಸಿದ ಪ್ರಸಂಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಗಾಂಧಿನಗರದ ತ್ರಿಭವನ್ ಥೇಟರ್ ಬಳಿ ತೆಲುಗು ಭಾಷೆ ಮಾತನಾಡುವ ವ್ಯಕ್ತಿ ಕನ್ನಡದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ. ಇದರಿಂದ ಕೋಪಗೊಂಡ ಸ್ಥಳೀಯರು ಆತನನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ವ್ಯಕ್ತಿಯನ್ನು ಥಳಿಸಿದೆ ಜನರೇ ಪೊಲೀಸರಿಗೆ ಮಾಹಿತಿ ನೀಡಿ ಒಪ್ಪಿಸಿದ್ದಾರೆ. ಬಳಿಕ ಪೊಲೀಸರು ಉಪ್ಪಾರಪೇಟೆ ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿದ್ದಾರೆ.
PublicNext
20/11/2020 07:57 am