ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಷಾಹಾರ ಸೇವನೆ: ಪ್ರಾಣ ಬಿಟ್ಟ 78 ಹಸುಗಳು

ಜೈಪುರ: ರಾಜಸ್ಥಾನದ ಚುರು ಜಿಲ್ಲೆಯಲ್ಲಿರುವ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ ವಿಷಾಹಾರ ಸೇವನೆಯಿಂದಾಗಿ 78 ಹಸುಗಳ ಸಾವನ್ನಪ್ಪಿವೆ.

ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ ದುರಂತ ಸಂಭವಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 78 ಹಸುಗಳು ಸಾವನ್ನಪ್ಪಿವೆ. ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ರಾಜಸ್ಥಾನದ ಪಶುಸಂಗೋಪನಾ ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಹಸುಗಳ ಸಾವಿಗೆ ವಿಷಾಹಾರ ಕಾರಣ ಎಂದು ಶಂಕಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ರಾಜಸ್ಥಾನ ಪಶು ಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕ ಡಾ.ಜಗದೀಶ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ತಂಡ ರಚನೆ ಮಾಡಲಾಗಿದೆ. ರಾಜಸ್ಥಾನದ ಸರ್ದರ್ಶಹರ್‌ನ ಬಿಲ್ಯುಬಾಸ್ ರಾಂಪುರ ಗ್ರಾಮ ದಲ್ಲಿರುವ ಗೋಶಾಲೆಗೆ ಈ ತಂಡವನ್ನು ರವಾನೆ ಮಾಡಲಾಗಿದೆ.

Edited By : Nagaraj Tulugeri
PublicNext

PublicNext

22/11/2020 05:40 pm

Cinque Terre

86.69 K

Cinque Terre

18