ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಬಿಹಾರ ಡಿಜಿಪಿ : ರಾಜಕೀಯ ಟಚ್ ಪಡೆಯಬಹುದೇ ಸುಶಾಂತ್ ಸಿಂಗ್ ಕೇಸ್?

ನವದೆಹಲಿ : ಬಿಹಾರದ ಡಿಜಿಪಿ (ಡೈರೆಕ್ಟರ್ ಜನರಲ್ ಆಫ್ ಪೊಲೀಸ್) ಗುಪ್ತೇಶ್ವರ್ ಪಾಂಡೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ರಾಜ್ಯಪಾಲ ಫಾಗು ಚೌಹಾಣ್ ರಾಜೀನಾಮೆ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡು ಸುದ್ದಿಯಾಗಿದ್ದ ಡಿಜಿಪಿ ಏಕಾಏಕಿ ರಾಜೀನಾಮೆ ನೀಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಸುಶಾಂತ್ ಪ್ರಕರಣದ ಹಿನ್ನೆಲೆಯಲ್ಲಿ ನಿವೃತ್ತಿ ಪಡೆದುಕೊಂಡಿದ್ದಾರೆ ಎಂಬ ಆರೋಪ ಕೂಡಾ ಕೇಳಿಬರುತ್ತಿದೆ.

ಆದರೆ ಈ ಆರೋಪ ತಳ್ಳಿ ಹಾಕಿದ ಪಾಂಡೆ, ಸುಶಾಂತ್ ಪ್ರಕರಣದ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಂಡಿಲ್ಲ ಎಂದಿದ್ದಾರೆ.

ವರದಿಗಳ ಪ್ರಕಾರ, ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಕ್ಸಾರ್ ಜಿಲ್ಲೆಯ ಸಾಹ್ ಪುರ್ ಕ್ಷೇತ್ರದಲ್ಲಿ ಆಡಳಿತಾರೂಢ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

Edited By : Nirmala Aralikatti
PublicNext

PublicNext

23/09/2020 12:11 pm

Cinque Terre

63.73 K

Cinque Terre

1