ಮೈಸೂರು: ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ರೋಹಿಣಿ ಸಿಂಧೂರಿ ಅವರು ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಹೋಗಿದ್ದಾರೆ. ಅಲ್ಲಿ ಅವರು ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ದೇವಾಲಯದಲ್ಲಿ ಧ್ಯಾನ ಪ್ರಾರ್ಥನೆಯಲ್ಲಿ ಮುಳುಗಿದ್ದರು. ನಂತರ ನಂಜುಂಡನಿಗೆ ಹಾಲು, ಎಳನೀರು ಅಭಿಷೇಕ ಮಾಡಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಪೂಜೆ ಬಳಿಕ ಕಪಿಲಾ ನದಿಯ ಸ್ನಾನಘಟಕ್ಕೆ ತೆರಳಿ ಅಲ್ಲಿನ ಸ್ಥಿತಿಗತಿಯನ್ನು ವೀಕ್ಷಿಸಿದರು. ಇದೇ ವೇಳೆ ದೇವಾಲಯದಲ್ಲಿ ಆಗಬೇಕಾಗಿರುವ ವಿವಿದ ಅಭಿವೃದ್ದಿ ಕಾರ್ಯಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.
ರೋಹಿಣಿ ಅವರು ಅಧಿಕಾರ ಸ್ವೀಕಾರಕ್ಕೂ ಮುನ್ನ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದರು. ನಂತರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು.
PublicNext
06/10/2020 02:59 pm