ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

SBI ನೂತನ ಅಧ್ಯಕ್ಷರಾಗಿ ದಿನೇಶ್ ಕುಮಾರ್ ಖರಾ ನೇಮಕ

ನವದೆಹಲಿ: ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ)ದ ನೂತನ ಅಧ್ಯಕ್ಷರನ್ನಾಗಿ ಹಿರಿಯ ಬ್ಯಾಂಕರ್ ದಿನೇಶ್ ಕುಮಾರ್ ಖರಾ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಜನೀಶ್ ಕುಮಾರ್ ತಮ್ಮ ಮೂರು ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ದಿನೇಶ್ ಕುಮಾರ್ ಅವರನ್ನು ನೇಮಿಸಲಾಗಿದೆ.

ಕೇಂದ್ರ ಸರ್ಕಾರವು ಮೂರು ವರ್ಷಗಳ ಅವಧಿಗೆ ದಿನೇಶ್ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ.

ಈ ಅವಧಿಯು 2020ರ ಅಕ್ಟೋಬರ್ 7ರಿಂದ ಅಥವಾ ಹುದ್ದೆಯ ಉಸ್ತುವಾರಿ ವಹಿಸಿಕೊಂಡ ದಿನಾಂಕದಿಂದ ಮುಂದಿನ ಆದೇಶದವರೆಗೆ ಇರುತ್ತದೆ. ಹಣಕಾಸು ಸಚಿವಾಲಯವು ಈ ಅಧಿಸೂಚನೆಯನ್ನು ಹೊರಡಿಸಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷರನ್ನಾಗಿ ದಿನೇಶ್ ಕುಮಾರ್ ಅವರನ್ನು ನೇಮಿಸುವಂತೆ ಬ್ಯಾಂಕ್ಸ್ ಬೋರ್ಡ್ ಬ್ಯೂರೋ(ಬಿಬಿಬಿ) ಕಳೆದ ತಿಂಗಳು ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.

Edited By : Nirmala Aralikatti
PublicNext

PublicNext

07/10/2020 01:18 pm

Cinque Terre

49.61 K

Cinque Terre

1

ಸಂಬಂಧಿತ ಸುದ್ದಿ