ದೆಹಲಿ : ಎಲ್ಲೆಡೆ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಿಗೊಳಿಸುತ್ತಾರೆ ಹಾಗಾಗಿಯೇ ಸಿಎಂ ದೆಹಲಿ ಪ್ರವಾಸ ಕೈಗೊಂಡಿದ್ದಾರೆ ಎನ್ನುವ ಬಿಸಿ ಬಿಸಿ ಚರ್ಚೆಯ ಮಧ್ಯೆ ಹೊಸದೊಂದು ಬೆಳವಣಿಗೆ ನಡೆದಿದೆ.
ಹೌದು ಸಿಎಂ ದೆಹಲಿ ಪ್ರವಾಸ ಕೈಗೊಂಡ ಮೇಲೆ ಸಾಕಷ್ಟು ಸಚಿವಾಕಾಂಕ್ಷಿಗಳಲ್ಲಿಯೂ ಸಾಕಷ್ಟು ನಡುಕ ಉಂಟಾಗಿದೆ.
ಆದ್ರೆ ಇದ್ದೇಲ್ಲದ ಮಧ್ಯೆ ಇಂದು ಸಂಪುಟ ವಿಸ್ತರಣೆ ಹಾಗೂ ಇತರೆ ವಿಷಯಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ರಾಷ್ಟ್ರ ರಾಜಧಾನಿಯಲ್ಲಿ ಸುಮಾರು ಅರ್ಧ ಗಂಟೆಯ ಕಾಲ ಪ್ರಧಾನಿ ಮೋದಿ ಜೊತೆ ಚರ್ಚೆ ನಡೆಸಿದ್ದಾರೆ.
ಚರ್ಚೆ ಬಳಿಕ ಮಾತನಾಡಿದ ಯಡಿಯೂರಪ್ಪ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಪ್ರಧಾನಿ ಜೊತೆ ಚರ್ಚೆ ಮಾಡಿದೆ.
ಕೊವಿಡ್ ಹಿನ್ನೆಲೆ ಎಚ್ಚರಿಕೆಯಿಂದ ಇರಲು ಪ್ರಧಾನಿ ಸೂಚಿಸಿದ್ದಾರೆ.
ಹಾಗೆಯೇ ಸಂಪುಟ ವಿಸ್ತರಣೆ ಬಗ್ಗೆ ನಡ್ಡಾ ಹತ್ತಿರ ಚರ್ಚಿಸಲು ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
PublicNext
18/09/2020 05:38 pm