ನವದೆಹಲಿ: ವಿವಾದಾತ್ಮಕ ಕೃಷಿ ಮಸೂದೆ ವಿರೋಧಿಸಿ ಭಾರತ ಬಂದ್ ಪ್ರತಿಭಟನೆ ವೇಳೆ, ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪಂಜಾಬ್ ನ ಯುವ ಕಾಂಗ್ರೆಸ್ ಅಧ್ಯಕ್ಷ ಬ್ರಿಂದರ್ ಧಿಲ್ಲೋನ್ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.
ಇದೇ ಘಟನೆಗೆ ಸಂಬಂಧಿಸಿದಂತೆ ಪಂಜಾಬ್ ಯುವ ಕಾಂಗ್ರೆಸ್ ನ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು.
ಅಲ್ಲದೆ, ಎರಡು ವಾಹನಗಳನ್ನು ಸಹ ವಶಪಡಿಸಿಕೊಂಡಿದ್ದರು.
ರಾಜ್ ಪಾತ್ ನ ಮಾನ್ ಸಿಂಗ್ ಕ್ರಾಸಿಂಗ್ ಗೆ ಟ್ರ್ಯಾಕ್ಟರ್ ಅನ್ನು ಟ್ರಕ್ ನಲ್ಲಿ ಸಾಗಿಸಿ ತಂದಿದ್ದ 20 ಮಂದಿ ಪಂಜಾಬ್ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಅದಕ್ಕೆ ಬೆಂಕಿ ಹಚ್ಚಿ ಸುಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪಂಜಾಬ್ ನ ಯುವ ಕಾಂಗ್ರೆಸ್ ಕಾರ್ಯಕರ್ತರು ಪಂಜಾಬ್ ಪೊಲೀಸರ ಕಾರಿನಲ್ಲಿ ದೆಹಲಿಗೆ ಬಂದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
PublicNext
29/09/2020 06:52 pm