ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ನಿಜಕ್ಕೂ ಎಲ್ಲರೂ ತಲೆತಗ್ಗಿಸುವಂತೆ ಮಾಡಿದೆ.
ಇನ್ನೂ ಈ ಪ್ರಕರಣದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತೈಸಲು ಹೋಗಿದ್ದ ಟಿಎಂಸಿ ನಾಯಕರನ್ನು ಉತ್ತರ ಪ್ರದೇಶ ಪೊಲೀಸರು ಅರ್ಧದಲ್ಲಿಯೇ ತಡೆದ ಘಟನೆ ನಡೆದಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ತೃಣಮೂಲ ಕಾಂಗ್ರೆಸ್, ನಮ್ಮ ಪಕ್ಷದ ಸಂಸದರನ್ನು ಪೊಲೀಸರು ತಡೆದರು, ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಮಹಿಳೆಯ ಮನೆಯಿಂದ ಸ್ವಲ್ಪ ದೂರವಿರುವಾಗಲೇ ಪೊಲೀಸರು ತಡೆದಿದ್ದಾರೆ.
ನಮ್ಮ ಪಕ್ಷದ ನಿಯೋಗ ಸದಸ್ಯರು ದೆಹಲಿಯಿಂದ 200 ಕಿಲೋ ಮೀಟರ್ ಪ್ರಯಾಣ ಮಾಡಿ ಬಂದಿದ್ದರು. ಮಹಿಳೆಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳೋಣವೆಂದು ಹೋದರೆ ನಮಗೆ ಪೊಲೀಸರು ಅವಕಾಶ ನೀಡಿಲ್ಲ ಎಂದು ಆರೋಪಿಸಿದ್ದಾರೆ.
ಟಿಎಂಸಿ ನಿಯೋಗದಲ್ಲಿ ಸಂಸದರಾದ ಡೆರೆಕ್ ಒ ಬ್ರಿಯಾನ್, ಡಾ ಕಕೊಲಿ ಘೋಷ್ ದಸ್ತಿದಾರ್, ಪ್ರತಿಮಾ ಮೊಂಡಲ್ ಮತ್ತು ಮಾಜಿ ಸಂಸದೆ ಮಮತಾ ಠಾಕೂರ್ ಇದ್ದರು.
PublicNext
02/10/2020 02:48 pm