ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ ಭಾರತ ಕಿಸಾನ್ ಸಮಿತಿ ವತಿಯಿಂದ ಭಾರತ್ ಬಂದ್ ಗೆ ಕರೆ ನೀಡಲಾಗಿದೆ.
ಆಲ್ ಇಂಡಿಯಾ ಕಿಸಾನ್ ಸಂಘರ್ಷ ಸಮಿತಿಯ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರು ಸೆಪ್ಟೆಂಬರ್ 25 ರಂದು ದೇಶವ್ಯಾಪಿ ಬಂದ್ ಗೆ ಕರೆ ಕೊಟ್ಟಿದ್ದಾರೆ.
ಈ ಮಧ್ಯೆ, ಬಂದ್ ಆಚರಿಸುವ ಬಗ್ಗೆ ನಾವು ಚರ್ಚೆ ಮಾಡಿ, ನಿರ್ಧಾರ ತೆಗೆದುಕೊಳ್ತೇವೆ ಎಂದು ರೈತ ಸಂಘದ ಮುಖಂಡ ಕುರುಬೂರು ಶಾಂತಕುಮಾರ್ ಮಾಹಿತಿ ನೀಡಿದ್ದಾರೆ.
ಇನ್ನೂ ಈ ಕರ್ನಾಟಕ ಬಂದ್ ಗೆ ಕಾರ್ಮಿಕ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಮುಂಬೈ ಕರ್ನಾಟಕ ಸಂಘಟನೆ ಮತ್ತು ಬೆಂಗಳೂರು ಮೂಲದ ಸಂಘಟನೆಗಳ ಬೆಂಬಲ ಪಡೆಯುತ್ತೇವೆ ಎಂದೂ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
PublicNext
22/09/2020 08:02 am