ಸ್ಟಾಕ್‌ಹೋಮ್: 2020ನೇ ಸಾಲಿನ ರಸಾಯನಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿಗೆ ಇಬ್ಬರು ಮಹಿಳಾ ವಿಜ್ಞಾನಿಗಳನ್ನು ಬುಧವಾರ ಘೋಷಣೆ ಮಾಡಲಾಗಿದೆ.
ಜೀನೋಮ್ ಎಡಿಟಿಂಗ್ ವಿಧಾನದ ಅಭಿವೃದ್ಧಿಗಾಗಿ ಎಮಾನ್ಯುಯೆಲ್ ಶರ್‌ಪಾನ್ಟೈ (Emmanuelle Charpentier) ಮತ್ತು ಜೆನಿಫರ್ ಎ.ಡೌಡ್ನ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಎಮಾನ್ಯುಯೆಲ್ ಅವರು ಜರ್ಮನಿಯ ಬರ್ಲಿನ್‌ನ ಮ್ಯಾಕ್ಸ್ ಬ್ಲ್ಯಾಂಕ್ ಯೂನಿಟ್ ಫಾರ್ ದಿ ಸೈನ್ಸ್ ಆಫ್ ಪ್ಯಾಥೊಜೆನ್ಸ್‌ನ ವಿಭಾಗದ ನಿರ್ದೇಶಕಿಯಾಗಿದ್ದಾರೆ. ಜೆನಿಫರ್ ಎ.ಡೌಡ್ನ ಅಮೆರಿಕದ ಬರ್ಕ್ಲಿಯ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾದಲ್ಲಿ ಪ್ರೊಫೆಸರ್ ಆಗಿದ್ದಾರೆ.
PublicNext
07/10/2020 05:11 pm