ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಪ್ರತಿಭಟನೆ ನಡೆಸಿ ಪ್ರವೀಣ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ಲಕ್ಷ್ಮೇಶ್ವರ ತಾಲೂಕಿನ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ನವೀನ್ ಹೀರೆಮಠ ಹಾಗೂ ಮಂಡಳ ಅಧ್ಯಕ್ಷ ಫಕ್ಕೀರೇಶ ರಟ್ಟಿಹಳ್ಳಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಹಿಂದೂಗಳ ಹತ್ಯೆ ಸಾಮಾನ್ಯವಾಗಿದೆ. ಹಿಂದುಗಳ ಪರವೆನ್ನುವ ರಾಜ್ಯ ಬಿಜೆಪಿ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೆ ಕಣ್ಣುಮುಚ್ಚಿ ಕುಳಿತಿದೆ. ಈ ಹಿಂದೆಯೂ ಹಲವು ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆ ಆಗಿದ್ದರೂ ಸಂಬಂಧಿತ ಆರೋಪಿಗಳಿಗೆ ಯಾವುದೇ ಶಿಕ್ಷೆ ಆಗಿಲ್ಲ. ಅವರನ್ನು ಸುಮ್ಮನೇ ಬಿಟ್ಟಿರುವುದು ದುಃಖದ ಸಂಗತಿ’ ಎಂದರು.
ರಾಜ್ಯದ ಹಿಂದೂ ಜನತೆ ಬಿಜೆಪಿ ಸರ್ಕಾರದ ಮೇಲೆ ನಂಬಿಕೆ ಇಟ್ಟಿದೆ. ಜಿಹಾದಿಗಳಿಗೆ ತಕ್ಕ ಪಾಠ ಕಲಿಸಬೇಕು. ಇಲ್ಲದಿದ್ದರೆ, ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆಗಳು ಒಗ್ಗೂಡಿ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
PublicNext
29/07/2022 08:15 pm