ಬೆಂಗಳೂರು : ಕೊರೊನಾ ಬಿಕ್ಕಟ್ಟಿನ ಕುರಿತು 7 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಪ್ರಧಾನಿ ಮೋದಿ ಮತ್ತೆ ಲಾಕ್ ಡೌನ್ ಹೇರುವ ಬಗ್ಗೆ ಯಾವುದೇ ಪ್ರಸಾಪ ಮಾಡಿಲ್ಲ ಎಂದು ತಿಳಿದುಬಂದಿದೆ.
ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಖಾಸಗಿ ವಾಹಿನಿಯೊಂದಕ್ಕೆ ಮಾತನಾಡಿದ ಸಚಿವರು, ಬುಧವಾರ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆದ ಚರ್ಚೆಯಲ್ಲಿ ಲಾಕ್ ಡೌನ್ ಬಗ್ಗೆ ಚರ್ಚೆಯಾಗಿಲ್ಲ.
ಮತ್ತೆ ಲಾಕ್ ಡೌನ್ ಮಾಡುವ ಯೋಚನೆಯಿಲ್ಲ ಎಂದರು.
ಕೋವಿಡ್ ಸೋಂಕನ್ನು ಲಘುವಾಗಿ ಪರಿಗಣಿಸಬೇಡಿ, ಕಿರಿಕಿರಿ ಅನ್ನಿಸಿದರೂ ಮಾಸ್ಕ್ ಮರೆಯಬೇಡಿ, ಪರೀಕ್ಷೆ, ಶೋಧ ಮತ್ತು ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಪ್ರಧಾನಿ ಮೋದಿ ಅವರು ಸಿಎಂಗಳಿಗೆ ಸಲಹೆ ನೀಡಿದ್ದಾರೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರ, ಉತ್ತರ ಪ್ರದೇಶ, ತಮಿಳುನಾಡು, ದಿಲ್ಲಿ ಮತ್ತು ಪಂಜಾಬ್ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ಜತೆಗಿನ ಈ ಸಭೆಯಲ್ಲಿ ಭಾಗವಹಿಸಿದ್ದರು.
PublicNext
24/09/2020 10:38 am