ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದನ ಮೇಯಿಸಲು ಹೋದ ಹುಡುಗನನ್ನು ಎಳೆದೊಯ್ದ ಮೊಸಳೆ

ರಾಯಚೂರು: ನದಿಯಲ್ಲಿ ನೀರು ಕುಡಿಯುತ್ತಿದ್ದ ಬಾಲಕನನ್ನ ಮೊಸಳೆ ಎಳೆದೊಯ್ದ ಘಟನೆ ರಾಯಚೂರು ತಾಲೂಕಿನ ಡೊಂಗರಾಂಪುರ ಬಳಿ ಕೃಷ್ಣ ನದಿಯಲ್ಲಿ ನಡೆದಿದೆ.

12 ವರ್ಷದ ಮಲ್ಲಿಕಾರ್ಜುನ್ ಗೆಳೆಯರ ಜೊತೆ ದನಗಳನ್ನ ಮೇಯಿಸಲು ಹೋಗಿದ್ದನು. ಮಧ್ಯಾಹ್ನ ಸುಮಾರು ಎರಡು ಗಂಟೆಗೆ ಐವರು ಸ್ನೇಹಿತರ ಜೊತೆ ನದಿ ದಡದಲ್ಲಿ ನೀರು ಕುಡಿಯುತ್ತಿರುವಾಗ ಮೊಸಳೆ ದಾಳಿ ನಡೆಸಿ ಮಲ್ಲಿಕಾರ್ಜುನನ್ನು ಎಳೆದುಕೊಂಡು ಹೋಗಿದೆ. ಜೊತೆಯಲ್ಲಿದ್ದ ಐವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿ, ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ. ನದಿಯ ತಗ್ಗು ಪ್ರದೇಶಗಳಲ್ಲಿ ಹೆಚ್ಚು ನೀರು ನಿಂತಿದ್ದು ಮೊಸಳೆಗಳ ಕಾಟ ಹೆಚ್ಚಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ನದಿ ದಂಡೆಯಲ್ಲಿ ಮಲ್ಲಿಕಾರ್ಜುನ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Nagaraj Tulugeri
PublicNext

PublicNext

03/12/2020 08:58 am

Cinque Terre

51.94 K

Cinque Terre

0