ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೀರಿಯಲ್ ನಟಿಯನ್ನು ಬಲಿ ಪಡೆದ ಕೊರೊನಾ

ಮುಂಬೈ: ಸೀರಿಯಲ್ ನಟಿ ದಿವ್ಯಾ ಭಟ್ನಾಗರ್ ಕೋವಿಡ್ ಸೊಂಕಿನಿಂದ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟಿ ದಿವ್ಯಾ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ನಟಿ ದಿವ್ಯಾ ಭಟ್ನಾಗರ್ ಅವರು ಕಳೆದ ಹಲವು ದಿನಗಳ ಹಿಂದೆ ಕೊರೊನಾ ವೈರಸ್ ನಿಂದ ಬಳಲುತ್ತಿದ್ದರು. ಈ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅವರು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮುಂಬೈನ ಸೆವೆನ್ಹಿಲ್ಸ್ ಆಸ್ಪತ್ರೆಯಲ್ಲಿ ಕೋವಿಡ್-19 ನಿಂದಾಗಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರ ದೇಹ ಸ್ಥಿತಿ ಹದಗೆಟ್ಟ ನಂತರ ವೆಂಟಿಲೇಟರ್‍ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರಿಂದ ಅವರು ಸುಮಾರು ಒಂದು ವಾರದವರೆಗೆ ಈ ರೋಗದ ವಿರುದ್ಧ ಹೋರಾಡಿ ಇಂದು ಮೃತಪಟ್ಟಿದ್ದಾರೆ.

Edited By : Nagaraj Tulugeri
PublicNext

PublicNext

07/12/2020 01:33 pm

Cinque Terre

67.64 K

Cinque Terre

0