ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಖಾಸಗಿ ವಾಹಿನಿ ಕ್ಯಾಮೆರಾಮನ್ ನಿಧನ: 10 ದಿನಗಳ ಹಿಂದಷ್ಟೇ ಮದುವೆಯಾಗಿತ್ತು

ಚಿತ್ರದುರ್ಗ: ಕಳೆದ ಹತ್ತು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ಖಾಸಗಿ ವಾಹಿನಿಯೊಂದರ ಚಿತ್ರದುರ್ಗ ಜಿಲ್ಲೆ ಕ್ಯಾಮೆರಾಮನ್ ವಿನಾಯಕ ತೀವ್ರ ಉಸಿರಾಟದ ತೊಂದರೆಯಿಂದಾಗಿ ನಿಧನರಾಗಿದ್ದಾರೆ.

ತೀವ್ರ ಉಸಿರಾಟದ ತೊಂದರೆ ಕಾರಣ ವಿನಾಯಕ ಅವರನ್ನು ಚಿಕಿತ್ಸೆಗಾಗಿ ದಾವಣಗೆರೆಯ ಸಿಟಿ ಸೆಂಟ್ರಲ್ ಹಾಸ್ಪಿಟಲ್ ಗೆ ಕಳುಹಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಎಲ್ಲಾ ಪರೀಕ್ಷೆಗಳ ಬಳಿಕ ಕೋವಿಡ್ ದೃಢವಾಗಿದೆ. ಮನೆಯಲ್ಲಿ ವಯಸ್ಸಾದ ತಂದೆ-ತಾಯಿ ಇದ್ದೂ, ಇತ್ತೀಚೆಗೆ ಹೊಸ ಮನೆ ನಿರ್ಮಿಸದ ನಂತರ ದಾಂಪತ್ಯಕ್ಕೆ ಕಾಲಿಟ್ಟಿದ್ದರು.

ಚಿತ್ರದುರ್ಗ ತಾಲೂಕಿನ ಅನ್ನೇಹಾಳ್ ಗ್ರಾಮದ ವರಾದ ವಿನಾಯಕ ಚಿತ್ರದುರ್ಗದ ದವಳಗಿರಿ ಬಡಾವಣೆಯಲ್ಲಿ ವಾಸವಾ ಗಿದ್ದರು. ಚಿತ್ರದುರ್ಗ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ರು. ಪ್ರಸ್ತುತ ಖಾಸಗಿ ವಾಹಿನಿಯೊಂದರಲ್ಲಿ ಕ್ಯಾಮೆರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದಕ್ಕೂ ಮುಂಚೆ ಅನೇಕ ಮಾಧ್ಯಮ ಸಂಸ್ಥೆಗಳಲ್ಲಿ ಅವರು ಕೆಲಸ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

09/12/2020 01:09 pm

Cinque Terre

39.07 K

Cinque Terre

2