ಹರಿಯಾಣ : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ-ಹರಿಯಾಣ ಗಡಿ ಭಾಗವಾದ ಸಿಂಘು ಗಡಿಯಲ್ಲಿ ಪ್ರತಿಭಟನೆ ಮುಂದುವರೆದಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮತ್ತೊಬ್ಬ ರೈತ ಸಾವನ್ನಪ್ಪಿದ್ದಾರೆ. ಮೃತ ರೈತನನ್ನು ಪಂಜಾಬ್‌ನ ಭೀಮ್ ಸಿಂಗ್ ಎಂದು ಗುರುತಿಸಲಾಗಿದೆ.
ಪ್ರತಿಭಟನೆ ವೇಳೆ ಕುಸಿದು ಬಿದ್ದ ಭೀಮ್ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಸಿಂಘು ಗಡಿಯಲ್ಲಿ ಈವರೆಗೆ ಹೃದಯಾಘಾತದಿಂದ ಇಬ್ಬರು ರೈತರು, ಆತ್ಮಹತ್ಯೆಗೆ ಶರಣಾಗಿ ಒಬ್ಬ ರೈತ ಸೇರಿದಂತೆ ಸುಮಾರು ಆರು ಜನ ರೈತರು ಪ್ರತಿಭಟನೆ ಸಮಯದಲ್ಲೇ ಜೀವ ಬಿಟ್ಟದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಸಿಂಘು, ಟಿಕ್ರಿ ಸೇರಿದಂತೆ ದೆಹಲಿಯ ಗಡಿಗಳಲ್ಲಿ ಪಂಜಾಬ್ ಹಾಗೂ ಹರಿಯಾಣ ರೈತರು ಕಳೆದ ೨೧ ದಿನಗಳಿಂದ ‘ದೆಹಲಿ ಚಲೋ’ ಪ್ರತಿಭಟನೆ ನಡೆಸುತ್ತಿದ್ದಾರೆ.
PublicNext
18/12/2020 07:53 am