ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ವಾಮಿ ವಿವೇಕಾನಂದರ ಜನ್ಮದಿನದಂದೇ ಸ್ವಾಮಿ ಹರ್ಷಾನಂದರು ವಿಧಿವಶ

ಬೆಂಗಳೂರು: ನಗರದ ಬಸವನಗುಡಿಯ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ (91) ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಹರ್ಷಾನಂದ ಅವರಿಗೆ ಇಂದು ಮಧ್ಯಾಹ್ನ 1:05ರ ಸುಮಾರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ಅವರ ಅಂತ್ಯಕ್ರಿಯೆ ನೆರವೇರಲಿದ್ದು, ಇಂದು ಮತ್ತು ನಾಳೆ ಮಠದಲ್ಲಿ ಅವರ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸ್ವಾಮಿ ಹರ್ಷಾನಂದ ಅವರ ನಿಧನಕ್ಕೆ ಆದಿಚುಂಚನಗಿರಿ ಮಠದ ಶ್ರೀಗಳಾದ ನಿರ್ಮಲಾನಂದನಾಥ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಸ್ವಾಮಿ ಹರ್ಷಾನಂದ ಮಹಾರಾಜ್ ಅವರು ರಾಮಕೃಷ್ಣ ಮಠದ ಅತ್ಯಂತ ಹಿರಿಯ ಸನ್ಯಾಸಿಯಾಗಿದ್ದರು. 1989ರಿಂದ ಬೆಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾಗಿದ್ದರು. ರಾಮಕೃಷ್ಣ ಮಠದ ಆರನೇ ಅಧ್ಯಕ್ಷರಾದ ಸ್ವಾಮಿ ವಿರಾಜನಂದರಿಂದ ಮಂತ್ರದೀಕ್ಷೆಯನ್ನು ಪಡೆದಿದ್ದರು. 1962ರಲ್ಲಿ ಮಠದ 8ನೇ ಅಧ್ಯಕ್ಷರಾಗಿದ್ದ ಸ್ವಾಮಿ ವಿಶುದ್ಧಾನಂದರಲ್ಲಿ ಸನ್ಯಾಸಿ ದೀಕ್ಷೆಯನ್ನು ಸ್ವೀಕರಿಸಿದ್ದರು. ಮಂಗಳೂರು, ಮೈಸೂರು, ಬೇಲೂರು ಮಠ ಮತ್ತು ಅಲ್ಲಹಾಬಾದ್ ರಾಮಕೃಷ್ಣ ಮಠಗಳಲ್ಲೂ ಇವರು ಕಾರ್ಯ ನಿರ್ವಹಿಸಿದ್ದರು.

Edited By : Vijay Kumar
PublicNext

PublicNext

12/01/2021 04:19 pm

Cinque Terre

65.7 K

Cinque Terre

1