ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಹಕ್ಕಿಯಾಗಿದ್ದ ಮಾದಕ ನಟಿ ರಾಗಿಣಿಗೆ ಕೊನೆಗೂ ಬೇಲ್ ಸಿಕ್ಕಿದೆ. 140 ದಿನಗಳ ಬಂಧನದಿಂದ ರಾಗಿಣಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ರಾಗಿಣಿ ತಾಯಿ ರೋಹಿಣಿ ದ್ವಿವೇದಿ, ಈ ದಿನ ನಮಗೆ ಲಕ್ಕಿಯಾಗಿದೆ ಎಂದಿದ್ದಾರೆ. ನಮಗೆಲ್ಲ ತುಂಬಾ ಖುಷಿಯಾಗಿದೆ. ಇದುವರೆಗೂ ಯಾವುದೇ ಸಾಕ್ಷ್ಯಾಧಾರ ಇಲ್ಲದೇ ಮಗಳನ್ನು ಜೈಲಲ್ಲಿ ಇಟ್ಟಿದ್ದರು. ಜಾಮೀನು ಮಂಜೂರಾಗಿರುವ ವಿಷಯ ಫೋನ್ ಕರೆ ಮೂಲಕ ಗೊತ್ತಾಗಿದೆ. ಹೀಗಾಗಿ ಆಕೆಯನ್ನು ಕರೆದುಕೊಂಡು ಬರಲು ನಾವು ನವದೆಹಲಿಗೆ ಹೋಗುತ್ತಿದ್ದೇವೆ ಎಂದರು.
PublicNext
21/01/2021 01:20 pm