ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ ನಿಧನರಾಗಿದ್ದಾರೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಅವರು ಬಳಲುತ್ತಿದ್ದರು. ಕಳೆದ ವರ್ಷ ಸೆಪ್ಟೆಂಬರ್ 2ರಂದು ಗನ್ ಸ್ವಚ್ಛ ಮಾಡುವಾಗ ಆಕಸ್ಮಿಕವಾಗಿ ಗುಂಡು ತಗುಲಿ ತೀವ್ರವಾಗಿ ಗಾಯಗೊಂಡಿದ್ದರು. ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ಇತ್ತೀಚೆಗೆ ಅನಾರೋಗ್ಯ ಕಾರಣಕ್ಕೆ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಪಿ ಶರ್ಮಾ ಇಂದು ಕೊನೆಯುಸಿರೆಳೆದಿದ್ದಾರೆ.
PublicNext
03/02/2021 10:43 pm