ದೊಡ್ಡಬಳ್ಳಾಪುರ: ಪ್ರೊ.ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾರಾಘವೇಂದ್ರ ಅವರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಪ್ರಜಾ ವಿಮೋಚನಾ ಚಳವಳಿಯ ಅಧ್ಯಕ್ಷ ಮುನಿಆಂಜಿನಪ್ಪ ಆಗ್ರಹಿಸಿದರು.
ನಗರದ ತಾಲ್ಲೂಕು ಕಚೇರಿ ಮುಂದೆ ಶುಕ್ರವಾರ ಪ್ರಜಾ ವಿಮೋಚನಾ ಚಳವಳಿ ವತಿಯಿಂದ ಪ್ರೊ.ಭಗವಾನ್ ಮೇಲೆ ದೌರ್ಜನ್ಯ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಓರ್ವ ವಕೀಲೆಯಾಗಿ ಮೀರಾ ಮಾಡಿರುವ ಕೆಲಸ ಸಂವಿಧಾನಕ್ಕೆ ಮಾಡಿರುವ ಅಪಮಾನ. ಕೂಡಲೇ ಮೀರಾಳ ವಕೀಲ ವೃತ್ತಿಯ ನೋಂದಾವಣೆಯನ್ನು ರದ್ದು ಮಾಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಕೂಡಲೇ ಈಕೆಯನ್ನು ಬಂಧಿಸಿ ಗಡಿಪಾರು ಮಾಡುವಂತೆ ಕೆಲಸಕ್ಕೆ ಸರ್ಕಾರ ಮುಂದಾಗಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತಿತವಾಗುತ್ತಲೇ ಇರುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
PublicNext
05/02/2021 03:15 pm