ಮಡಿಕೇರಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರು ಮನೆಗಳು ಸಂಪೂರ್ಣ ಧ್ವಂಸಗೊಂಡಿವೆ. ಮನೆಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ಸಾಮಗ್ರಿಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿರುವ ದುರ್ಘಟನೆ ಮಡಿಕೇರಿ ತಾಲೂಕಿನ ಮೂರ್ನಾಡಿನಲ್ಲಿ ನಡೆದಿದೆ.
ಮಂದಣ್ಣ ಎಂಬುವರಿಗೆ ಸೇರಿದ ಲೈನ್ ಮನೆಯಲ್ಲಿ ಕಾಫಿ ತೋಟದ ಕೂಲಿ ಕಾರ್ಮಿಕರು ವಾಸವಾಗಿದ್ದಾರೆ. ಸೋಮಯ್ಯ, ವಿಜಯ ಮತ್ತು ರಶ್ಮಿ ಎಂಬುವರು ಲೈನ್ ಮನೆಯಲ್ಲಿ ವಾಸಿಸುತ್ತಿದ್ದರು. ಇಂದು ಮದ್ಯಾಹ್ನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರು ಮನೆಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.
PublicNext
10/02/2021 07:38 pm