ಬೆಂಗಳೂರು: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಫೆ.25 ರಂದು ವಿಧಾನಸೌಧ ಚಲೋ ಚಳವಳಿ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮುದ್ದೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.24ರಂದು ಮಧ್ಯಾಹ್ನ 4 ಗಂಟೆಗೆ ಮಾಗಡಿಯಿಂದ ಪಾದಯಾತ್ರೆ ಹೊರಟು ತಾವರೆಕೆರೆಯಲ್ಲಿ ವಾಸ್ತವ್ಯ ಹೂಡಲಾಗುವುದು ಎಂದರು.
ಫೆ.25ರಂದು ಬೆಳಗ್ಗೆ 9 ಗಂಟೆಗೆ ಪಾದಯಾತ್ರೆ ಮೂಲಕ ಫ್ರೀಡಂ ಪಾರ್ಕ್ ತಲುಪಿ ನಂತರ ರೈತರ ನಡಿಗೆ ವಿಧಾನಸೌಧದ ಕಡೆಗೆ ಹೊರಟು ನಮ್ಮ ಬೇಡಿಕೆಗಳನ್ನು ಬಗೆಹರಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ರೈತರ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದು ಮತ್ತು ಡಿ.23ರಂದು ರೈತರ ದಿನಾಚರಣೆಯನ್ನು ವಿಧಾನಸೌದದ ಬ್ಯಾಂಕ್ವೆಟ್ ಹಾಲ್ ಮತ್ತು ಸರ್ಕಾರಿ ಕಚೇರಿಗಳಲ್ಲಿ ಆಚರಿಸಬೇಕು ಎಂದು ಒತ್ತಾಯಿಸಿದ್ದಾರೆ.
PublicNext
23/02/2021 03:45 pm