ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಕ್ಷಕರ ದಿನದಂದೇ ಡಾ.ಸರ್ವಪಳ್ಳಿ ರಾಧಾಕೃಷ್ಣನ್ ಅವರ ಮೊಮ್ಮಗ ನಿಧನ

ಜೈಪುರ: ಮಾಜಿ ರಾಷ್ಟ್ರಪತಿ, ಭಾರತ ರತ್ನ ಪುರಸ್ಕೃತ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ 5ರಂದು ಭಾರತದಲ್ಲಿ ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ. ಆದರೆ ಇಂದೇ ರಾಧಾಕೃಷ್ಣನ್ ಅವರ ಮೊಮ್ಮಗ ಹಾಗೂ ಕೇಂದ್ರ ಆರೋಗ್ಯ ಇಲಾಖೆಯ ಮಾಜಿ ಕಾರ್ಯದರ್ಶಿ ಕೇಶವ ದೇಸಿರಾಜು (66) ಚೆನ್ನೈನ ಅಲ್ವಾರಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಕೇಶವ ದೇಸಿರಾಜು ಅವರು ಇಂದು ಬೆಳಗ್ಗೆ ನಿಧನರಾದರು. ಕೇಶವ ದೇಸಿರಾಜು ಅವರು ರಾಜಸ್ಥಾನ ಸರ್ಕಾರದ ಆರ್ಥಿಕ ಪರಿವರ್ತನಾ ಸಲಹಾ ಮಂಡಳಿಯ ಸದಸ್ಯರೂ ಆಗಿದ್ದರು.

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ, " ಕೇಶವ ದೇಸಿರಾಜು ಅವರೊಬ್ಬ ವಿಶಿಷ್ಟ, ಸೌಮ್ಯ ಮತ್ತು ಸೃಜನಶೀಲ ಚಿಂತಕರಾಗಿದ್ದರು ಮತ್ತು ಮಹೋನ್ನತ ವ್ಯಕ್ತಿಯಾಗಿದ್ದರು. ಅಷ್ಟೇ ಅಲ್ಲ, ಒಬ್ಬ ಮಹಾನ್ ಶಿಕ್ಷಣ ತಜ್ಞ ಮತ್ತು ಭಾರತದ ಮಾಜಿ ರಾಷ್ಟ್ರಪತಿ ಡಾ.ಎಸ್.ರಾಧಾಕೃಷ್ಣನ್ ಅವರ ಮೊಮ್ಮಗನಾಗಿದ್ದರು. ಆ ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ" ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

Edited By : Vijay Kumar
PublicNext

PublicNext

05/09/2021 10:46 pm

Cinque Terre

63.18 K

Cinque Terre

4