ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವೈರಲ್ ಆಯ್ತು ಹಿರಿ-ಕಿರಿ ಜೋಡಿಯ ಮದ್ವೆಯ ಫೋಟೋ: ಭಿನ್ನ ವಿಭಿನ್ನ ಕಮೆಂಟ್

ತುಮಕೂರು: ವಯಸ್ಸಿನಲ್ಲಿ ಬರೋಬ್ಬರಿ 20 ವರ್ಷ ಅಂತರವಿರುವ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಭಿನ್ನ ವಿಭಿನ್ನವಾಗಿ ಕಮೆಂಟ್ ಮಾಡುತ್ತಿದ್ದಾರೆ.

ಹೌದು. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಎಂಬುವರ ಜೊತೆ ಸಂತೆಮಾವತ್ತೂರು ಗ್ರಾಮದ ನಿವಾಸಿ ಮೇಘನಾ ಎಂಬ ಯುವತಿ ಮದುವೆಯಾಗಿದ್ದಾಳೆ. 45 ವರ್ಷದ ಶಂಕರಣ್ಣ ಜೊತೆ 25 ವರ್ಷದ ಯುವತಿ ಮೇಘನಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮೇಘನಾ ಬೇರೆಯವರ ಜೊತೆ ಮೊದಲೇ ಒಂದು ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪತಿ ಕಳೆದ ಎರಡು ವರ್ಷಗಳಿಂದ ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದೆ. ಪತಿ ಎರಡು ವರ್ಷಗಳಿಂದ ಬಾರದ ಹಿನ್ನೆಲೆಯಲ್ಲಿ ಮೇಘನಾಳೇ ಹೋಗಿ 45 ವರ್ಷದ ವ್ಯಕ್ತಿಯನ್ನ ಮದುವೆಯಾಗಿದ್ದಾಳಂತೆ. ಮೇಘನಾ ಸ್ವತಃ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತ ಕೇಳಿಕೊಂಡಿದ್ದಾಳೆ. ಈ ವೇಳೆ ಇದುವರೆಗೂ ಮದುವೆಯಾಗದ ಶಂಕರಣ್ಣ ಯುವತಿಯನ್ನ ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದಾರೆ. ಇಬ್ಬರು ಮದುವೆಯಾಗಿರುವ ಫೋಟೋ ನೋಡಿ ಟ್ರೋಲಿಗರು ಟ್ರೋಲ್ ಮಾಡುತ್ತಿದ್ದಾರೆ.

Edited By : Vijay Kumar
PublicNext

PublicNext

19/10/2021 12:44 pm

Cinque Terre

32.11 K

Cinque Terre

11