ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ(84) ಅವರು, ನಿನ್ನೆ ಗುರುವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. 1938ರಲ್ಲಿ ಶಿವಮೊಗ್ಗ ಜಿಲ್ಲೆಯ ನಗರದಲ್ಲಿ ಗಣೇಶ್ ರಾವ್ ಮತ್ತು ರಂಗನಾಯಕಮ್ಮ ದಂಪತಿಗಳ ಪುತ್ರರಾಗಿ ಜನಿಸಿದ್ದರು. ಇವರ ತಾತ ಶಾಮಣ್ಣನವರು ಖ್ಯಾತ ಸಂಗೀತ ವಿದ್ವಾಂಸರು. ಇವರ ಮೊಮ್ಮಗ ಆಗಿದ್ದ, ಶಿವಮೊಗ್ಗ ಸುಬ್ಬಣ್ಣ ಕೂಡ ಗಾಯಕರಾಗಿದ್ದರು.
PublicNext
12/08/2022 07:19 am