ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2 ಸಾವಿರ ಕೋಟಿ ರೂ. ಮೌಲ್ಯದ ಶಶಿಕಲಾ ಆಸ್ತಿ ಮುಟ್ಟುಗೋಲು

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ವಿ.ಕೆ.ಶಸಿಕಲಾ ಅವರ ಒಡೆತನದ 2,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಬುಧವಾರ ಮುಟ್ಟುಗೋಲು ಹಾಕಿಕೊಂಡಿದೆ. ಬೇನಾಮಿ ಆಸ್ತಿ ಕಾಯ್ದೆ ಅಡಿ ಈ ಕ್ರಮಕೈಗೊಳ್ಳಲಾಗಿದ್ದು, ನೋಟಿಸ್ ಕೂಡ ಅಂಟಿಸಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಐಟಿ ಅಧಿಕಾರಿಗಳು, ಶಶಿಕಲಾ, ಇಳವರಸಿ ಮತ್ತು ಸುಧಾಕರನ್ ಅವರಿಗೆ ಸೇರಿದ ಸಿರುಥಾವೂರ್ ಮತ್ತು ಕೊಡನಾಡಿನಲ್ಲಿರುವ 300 ಕೋಟಿ ರೂ.ಮೌಲ್ಯದ ಆಸ್ತಿ ಸೇರಿದಂತೆ ಒಟ್ಟು 2,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಸೇರಿರುವ ವಿ.ಕೆ.ಶಶಿಕಲಾ ಅವರು ಮುಂದಿನ ನಾಲ್ಕು ತಿಂಗಳಲ್ಲಿ ಬಿಡುಗಡೆ ಆಗಲಿದ್ದಾರೆ ಎನ್ನಲಾಗಿದೆ. ಇತ್ತ ಅವರ ಸಂಬಂಧಿಕರಾದ ಇಳವರಸಿ ಮತ್ತು ಸುಧಾಕರನ್ ಕೂಡ ಬೇನಾಮಿ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷಗಳ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

Edited By : Vijay Kumar
PublicNext

PublicNext

07/10/2020 05:36 pm

Cinque Terre

45.85 K

Cinque Terre

0

ಸಂಬಂಧಿತ ಸುದ್ದಿ