ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಶಾಂತ್ ಸಂಬರಗಿ ಚಳಿ ಬಿಡಿಸಿದ ‘ಕುಸುಮ’

ಬೆಂಗಳೂರು : ರಾಜ್ಯದಲ್ಲಿ ಬೈ ಎಲೆಕ್ಷನ್ ಕಾವು ಹೆಚ್ಚಾಗುತ್ತಿರುವ ಮಧ್ಯೆಯೇ ಸಾಕಷ್ಟು ಬೆಳವಣಿಗೆಗಳಾಗುತ್ತಿರುವ ಬಗ್ಗೆ ತಮಗೆಲ್ಲಾ ಗೊತ್ತೆ ಇದೆ.

ಇದರ ಮಧ್ಯೆ ಡ್ರಗ್ಸ್ ಜಾಡು ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಈಗಾಗಗಲೇ ಹಲವು ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಠಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಸದ್ಯ ಕಾಂಗ್ರೆಸ್ ಸೇರ್ಪಡೆಯಾದ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ಅವರ ಬಗ್ಗೆ ಫೇಸ್ಬುಕ್ ಅವಹೇಳನಕಾರಿ ಪೋಸ್ಟ್ ವೊಂದನ್ನಾ ಮಾಡಿದ್ದಾರೆ.

ಪೋಸ್ಟ್ ನಲ್ಲಿ ಕುಸುಮಾ ಅವರ ದುರಾದೃಷ್ಠ ಡಿ.ಕೆ. ರವಿ ಅವರಿಂದ ಡಿ.ಕೆ. ಶಿವಕುಮಾರ್ ಅವರಿಗೆ ವರ್ಗಾವಣೆಗೊಳ್ಳುತ್ತಿದೆ.

ಕುಸುಮಾ ಜಿಂದಾಬಾದ್ ಎಂದು ಪ್ರಶಾಂತ್ ಸಂಬರಗಿ ನಿನ್ನೆಯಷ್ಟೇ ತಮ್ಮ ಫೇಸ್ಬುಕ್ ನಲ್ಲಿ ಕುಸುಮಾ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿರುವ ಫೋಟೋ ಹಾಕಿ ಬರೆದುಕೊಂಡಿದ್ದಾರೆ.

ಡಿಕೆಶಿ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳ ದಾಳಿ ಹಿನ್ನೆಲೆಯಲ್ಲಿ ಪ್ರಶಾಂತ್ ಈ ಪೋಸ್ಟ್ ಮಾಡಿದ್ದಾರೆನ್ನಲಾಗಿದೆ.

ಇದೇ ಬೆನ್ನಲ್ಲೇ ಕುಸುಮಾ ಅದೇ ಫೇಸ್ ಬುಕ್ ಮೂಲಕವೇ ಪ್ರಶಾಂತ್ ಸಂಬರಗಿಗೆ ತಿರುಗೇಟು ನೀಡಿದ್ದಾರೆ.

ಸಹೋದರ ಪ್ರಶಾಂತ್ ಸಂಬರಗಿಯವರಿಗೆ ಎಂದು ಹೆಸರು ನಮೂದಿಸಿ ವಿಷಯ ಆರಂಭಿಸಿರುವ ಕುಸುಮಾ, ವೈಯುಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ.

ಕೆಲ ತಿಂಗಳುಗಳಿಂದ ನೀವು ಡ್ರಗ್ಸ್ ಹಾಗೂ ಇನ್ನಿತರ ಸಾಮಾಜಿಕ ಪಿಡುಗುಗಳ ವಿರುದ್ಧ ನಡೆಸುತ್ತಿರುವ ಹೋರಾಟ ಪ್ರಶಂಸನೀಯ. ಯುವಸಮೂಹಕ್ಕೆ ಡ್ರಗ್ಸ್ ವಿರುದ್ಧ ಜಾಗ್ರತೆ ಮೂಡಿಸುತ್ತಿರುವ ನಿಮಗೆ ಅಭಿನಂದನೆಗಳು ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಮುಂದುವರಿದು ಟೀಕಾ ಪ್ರಹಾರ ಆರಂಭಿಸಿರುವ ಕುಸುಮಾ, ಯಾರನ್ನೋ ಮೆಚ್ಚಿಸುವ ಭರದಲ್ಲಿ ನನ್ನ ಅದೃಷ್ಟ(Luck) ವಿಷಯವನ್ನು ಪ್ರಸ್ತಾಪಿಸಿದ್ದೀರಿ.

ಎಲ್ಲರ ಬದುಕಿನಲ್ಲಿ ಇಣುಕುವ ನೀವು ಹಿಂದೆ-ಮುಂದೆ ತಿಳಿಯದೇ ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂಬುದು ನನ್ನ ಅನಿಸಿಕೆ.

ಪ್ರತಿಯೊಬ್ಬರ ಬದುಕಿನಲ್ಲೂ ಏಳು-ಬೀಳುಗಳಿರುತ್ತವೆ. ಇದೇ ರೀತಿ ನಿಮ್ಮ ಮನೆಯಲ್ಲೇ ಅಕ್ಕ-ತಂಗಿ ನನ್ನ ಸ್ಥಾನದಲ್ಲಿದ್ದಿದ್ದರೆ ಹೀಗೆಯೇ ವಿಡಂಬನೆ ಮಾಡುತ್ತಿದ್ದಿರಾ? ಹೆಣ್ಣು ಎಂಬ ಮಾತ್ರಕ್ಕೆ ಇಂತಹ ವಿಡಂಬನೆ ಮತ್ತು ಅಪಪ್ರಚಾರಗಳಿಗೆ ಒಳಗಾಗಬೇಕೆ? ಬೇರೆಯವರ ಮನೆಯ ಹೆಣ್ಣುಮಗಳ ಅದೃಷ್ಟ ಯಾವುದು ಎಂದು ಹುಡುಕುವ ಶಕ್ತಿ ಇರುವ ನಿಮಗೆ ಹಾಥರಸ್ ನ ಅತ್ಯಾಚಾರ-ಕೊಲೆ ಪ್ರಕರಣ ಕಣ್ಣಿಗೆ ಕಾಣುತ್ತಿಲ್ಲವೇಕೆ? ಎಂದು ಪ್ರಶ್ನಿಸಿದ್ದಾರೆ.

ಸಹೋದರ ಪ್ರಶಾಂತ್ ಸಂಬರಗಿ ಅವರೇ, ಇದರಿಂದ ಹೆಣ್ಣುಮಕ್ಕಳ ಕುರಿತ ನಿಮ್ಮ ಬುದ್ಧಿಮಟ್ಟ ತಿಳಿಯುತ್ತದೆ.

ಈ ಆಲೋಚನೆಗಳನ್ನು ಮುಂದುವರಿಸಿ. ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ಚಮಕ್ ಕೊಟ್ಟಿದ್ದಾರೆ.

Edited By : Nirmala Aralikatti
PublicNext

PublicNext

06/10/2020 10:31 am

Cinque Terre

84.71 K

Cinque Terre

17

ಸಂಬಂಧಿತ ಸುದ್ದಿ