ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಅಂಗಡಿಯವರ ಬದ್ಧತೆ, ಸಮರ್ಪಣೆ ಬಗ್ಗೆ ಹೇಳಲು ಪದಗಳು ಸಾಲದು'

ನವದೆಹಲಿ: ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಬಿಜೆಪಿ ನಾಯಕರು ಅಲ್ಲದೇ ಇಡೀ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

ಸುರೇಶ್ ಅಂಗಡಿಯವರ ಕುಟುಂಬಸ್ಥರು ಸಹ ದೆಹಲಿಯಲ್ಲಿದ್ದು, ಪಾರ್ಥಿವ ಶರೀರವನ್ನ ಬೆಳಗಾವಿಗೆ ತರಲು ಚಿಂತನೆ ನಡೆಸಲಾಗುತ್ತಿದೆ. ದೆಹಲಿಯ ಏಮ್ಸ್ ಆಸ್ಪತ್ರೆಗೆ ರಾಜ್ಯ ಸಂಸದರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕ ಗಣ್ಯರು ಭೇಟಿ ನೀಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಜೆ.ಪಿ.ನಡ್ಡಾ, ಇಂದು ನಮ್ಮ ಸಹೋದ್ಯೋಗಿಯನ್ನ ಕಳೆದುಕೊಂಡಿದ್ದೇವೆ. ಚಿಕ್ಕ ವಯಸ್ಸಿನಲ್ಲಿ ಅಂಗಡಿಯವರು ನಮ್ಮನ್ನು ಅಗಲಿದ್ದಾರೆ. ಅವರು ಜನಸೇವೆಗಾಗಿ ತಮ್ಮ ಜೀವನವನ್ನ ಮುಡಿಪು ಇಟ್ಟಿದ್ದರು. ಪಕ್ಷದ ಬೆಳವಣಿಗೆಯಲ್ಲಿಯೂ ಅವರ ಪಾತ್ರ ಮುಖ್ಯವಾಗಿತ್ತು ಎಂದು ಹೇಳಿದರು.

ಸುರೇಶ್ ಅಂಗಡಿಯವರ ಜೊತೆ ಗುಲಾಬಿ ಹೂ ಹಿಡಿದು ನಿಂತಿರುವ ಫೋಟೋ ಟ್ವೀಟ್ ಮಾಡಿರುವ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್, ಅಂಗಡಿಯವರ ಸಾವಿನ ಸುದ್ದಿ ಆಘಾತವನ್ನುಂಟು ಮಾಡಿದೆ. ಓರ್ವ ಸೋದರನಂತಿದ್ದ ಅಂಗಡಿಯವರ ಬದ್ಧತೆ ಮತ್ತು ಸಮರ್ಪಣೆ ಬಗ್ಗೆ ಹೇಳಲು ಪದಗಳು ಸಾಲದು. ಅವರ ಕುಟುಂಬ ಅಪ್ತ ವಲಯಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Edited By : Vijay Kumar
PublicNext

PublicNext

23/09/2020 11:30 pm

Cinque Terre

92.65 K

Cinque Terre

1

ಸಂಬಂಧಿತ ಸುದ್ದಿ