ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೀದಿ ಕಚೇರಿ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಖಾಕಿ ಅಶ್ರುವಾಯು ಪ್ರಹಾರ

ಕೋಲ್ಕತ್ತಾ: ಕೊರೊನಾ ಭೀತಿಯ ಮಧ್ಯೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಘರ್ಷ ನಡೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ, ಫಿರಂಗಿ ಪ್ರಯೋಗ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಇಂದು ಕೋಲ್ಕತ್ತಾ ಹಾಗೂ ಹೌರಾದಿಂದ ನಬನ್ನಾದವರೆಗೆ ಪ್ರತಿಭಟನಾ ಮೆರವಣಿಗೆ ಆಯೋಜಿಸಿದ್ದರು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ನೇಮಕಗೊಂಡಿರುವ ಸಂಸದ ತೇಜಸ್ವಿ ಸೂರ್ಯ ಮೆರವಣಿಗೆ ನಾಯಕತ್ವ ವಹಿಸಿದ್ದರು. ಈ ವೇಳೆ ಪ್ರತಿಭಟನಾಕಾರರು ಬ್ಯಾರಿಕೇಡ್​ಗಳನ್ನು ಮುರಿದು, ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಇದರಿಂದಾಗಿ ಗಲಭೆ ನಿಯಂತ್ರಣ ಸಮವಸ್ತ್ರ ತೊಟ್ಟಿದ್ದ ಪೊಲೀಸರು ಅಶ್ರುವಾಯು ಶೆಲ್‌ ಮತ್ತು ವಾಟರ್ ಕೆನನ್‌ಗಳನ್ನು ಬಳಸಿ ಗುಂಪು ಚದುರಿಸಲು ಯತ್ನಿಸಿದರು.

ಪೊಲೀಸರ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಲೋಕೆತ್ ಚಟರ್ಜಿ, 'ಪೊಲೀಸರು ಬಿಜೆಪಿ ಕಾರ್ಯಕರ್ತರನ್ನೇ ಗುರಿಯಾಗಿಸಿಕೊಂಡು ಲಾಠಿ ಚಾರ್ಜ್ ಮಾಡುತ್ತಿದ್ದಾರೆ. ಕಲ್ಲುತೂರಾಟದಲ್ಲಿ ನಮ್ಮ ಕಾರ್ಯಕರ್ತರು ಪಾಲ್ಗೊಂಡಿಲ್ಲ' ಎಂದು ಕಿಡಿಕಾರಿದ್ದಾರೆ.

Edited By : Vijay Kumar
PublicNext

PublicNext

08/10/2020 05:50 pm

Cinque Terre

118.89 K

Cinque Terre

4

ಸಂಬಂಧಿತ ಸುದ್ದಿ