ನವದೆಹಲಿ: ಕೇಂದ್ರ ಸಚಿವ ಹಾಗೂ ಲೋಕ ಜನಶಕ್ತಿ ಪಕ್ಷದ ಮುಖಂಡ ರಾಮ್ ವಿಲಾಸ್ ಪಾಸ್ವಾನ್ (74) ಅವರು ವಿಧಿವಶರಾಗಿದ್ದಾರೆ.
ದೇಶದ ಅತ್ಯಂತ ಪ್ರಸಿದ್ಧ ದಲಿತ ನಾಯಕರಲ್ಲಿ ಒಬ್ಬರಾದ ಪಾಸ್ವಾಲ್ ಕಳೆದ ಕೆಲವು ವಾರಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಇತ್ತೀಚೆಗೆ ದೆಹಲಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ತಮ್ಮ ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿ ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಕಳೆದ ವಾರ ಟ್ವೀಟ್ ಮಾಡಿದ್ದರು. "ಕಳೆದ ಹಲವು ದಿನಗಳಿಂದ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಸಂಜೆ ಕೆಲವು ಹಠಾತ್ ಬೆಳವಣಿಗೆಗಳಿಂದಾಗಿ, ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಮಾಡಬೇಕಾಯಿತು. ಅಗತ್ಯವಿದ್ದಲ್ಲಿ ವೈದ್ಯರು ಕೆಲವು ವಾರಗಳ ನಂತರ ಮತ್ತೊಮ್ಮೆ ಶಸ್ತ್ರಚಿಕಿತ್ಸೆ ಮಾಡಬಹುದು. ಈ ಹೋರಾಟದ ಸಮಯದಲ್ಲಿ ಆಸರೆಯಾದ ಎಲ್ಲರಿಗೂ ಧನ್ಯವಾದಗಳು'' ಎಂದು ತಿಳಿಸಿದ್ದರು.
PublicNext
08/10/2020 08:55 pm