ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಅಧಿಕಾರಿಗಳೇ ಹುಷಾರ್‌..! ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡದಿದ್ರೆ ಎತ್ತಂಗಡಿ, ಸಸ್ಪೆಂಡ್ ಫಿಕ್ಸ್'

ಬೆಂಗಳೂರು: ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡದಿದ್ದರೆ ಎತ್ತಂಗಡಿ ಇಲ್ಲವೆ ಸಸ್ಪೆಂಡ್ ಮಾಡಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧಿಕಾರಿಗಳ ವಿರುದ್ಧ ಗುಡುಗಿದ್ದಾರೆ.

ಆರ್‌ಆರ್‌ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಮತ್ತಿಕೆರೆಯಲ್ಲಿ ಪೂರ್ವಭಾವಿ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ನನಗೆ ಕನಕಪುರ ವಿಧಾನಸಭೆ ಕ್ಷೇತ್ರ ಎಷ್ಟು ಮುಖ್ಯವೋ, ರಾಜರಾಜೇಶ್ವರಿ ನಗರವೂ ಅಷ್ಟೇ ಮುಖ್ಯ. ನಮ್ಮ ಕಾರ್ಯಕರ್ತರ ಮೇಲೆ ಎಫ್​ಐಆರ್ ಆಗಿರುವ ಮಾಹಿತಿ ಕೊಡಿ. ತಕ್ಷಣವೇ ಎಫ್​ಐಆರ್ ಮಾಡಿರುವ ಅಧಿಕಾರಿಯನ್ನು ಸಸ್ಪೆಂಡ್ ಮಾಡಿಸುತ್ತೇನೆ ಎಂದು ಕಿಡಿಕಾರಿದರು.

ಆರ್.ಆರ್. ನಗರದಲ್ಲಿ ಪಕ್ಷದ ಕಾರ್ಯಕರ್ತರಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಇಂದಿಗೆ ಅವೆಲ್ಲವೂ ಕೊನೆಗೊಳ್ಳಲಿದೆ. ಕಾರ್ಯಕರ್ತರ ವಿರುದ್ಧ ಹಾಕಿರುವ ಮೊಕದ್ದಮೆಗಳಲ್ಲಿ ವಾದ ಮಂಡಿಸಲು ವಕೀಲರನ್ನು ನೇಮಿಸುತ್ತೇನೆ. ಇನ್ನು ಹತ್ತು ದಿನ ಇಲ್ಲೇ ಇರುತ್ತೇನೆ. ಈ ಉಪಚುನಾವಣೆಯಿಂದ ಬಿ.ಎಸ್‌.ಯಡಿಯೂರಪ್ಪ ಅವರು ಅಧಿಕಾರದಿಂದ ಕೆಳಗೆ ಇಳಿಯುವುದಿಲ್ಲ. ಆದರೆ ಇಲ್ಲಿನ ಜನರು ಹಾಗೂ ಕಾರ್ಯಕರ್ತರು ಅನುಭವಿಸುತ್ತಿರುವ ಕಿರುಕುಳಕ್ಕೆ ಪರಿಹಾರ ನೀಡಬೇಕಿದೆ ಎಂದು ಹೇಳಿದರು.

Edited By : Vijay Kumar
PublicNext

PublicNext

09/10/2020 09:28 am

Cinque Terre

66.01 K

Cinque Terre

7

ಸಂಬಂಧಿತ ಸುದ್ದಿ