ಬೆಂಗಳೂರು: ಕೊರೊನಾ ಸೋಂಕಿನಿಂದ ಕೆಲ ಕೇಂದ್ರ ಸಚಿವರು, ಸಂಸದರು ನಿಧನರಾದರು. ಹಾಗಂತ ಲೋಕಸಭೆ ಮುಚ್ಚಕ್ಕಾಗುತ್ತಾ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ.
ನಗರದ ಸ್ಟಾರ್ ಹೋಟೆಲ್‌ನಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಸಭೆಯಲ್ಲಿ ಮಾತನಾಡುತ್ತಾ ವಿದ್ಯಾಗಮ ಯೋಜನೆ ನಿಲ್ಲಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೊರೊನಾ ಬಂದ ತಕ್ಷಣ ಎಲ್ಲವನ್ನೂ ನಿಲ್ಲಿಸಲಿಕ್ಕೆ ಆಗುವುದಿಲ್ಲ. ರೈತರೂ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಹಾಗಂತ ಉಳುಮೆ ಮಾಡುವುದನ್ನು ನಿಲ್ಲಿಸಿ ಅಂದ್ರೆ ಆಗುತ್ತಾ? ವಿದ್ಯಾಗಮ ಯೋಜನೆಗೂ ಕೋವಿಡ್‌ಗೂ ಸಂಬಂಧವಿಲ್ಲ. ವಿದ್ಯಾಗಮ ಯೋಜನೆ ಇಲ್ಲದಿರುವ ಸಂದರ್ಭದಲ್ಲಿಯೂ ಕೋವಿಡ್ ಬಂದಿದೆ. ಕೊರೊನಾ ಬಂತು ಅಂತ ಯೋಜನೆ ನಿಲ್ಲಿಸಕ್ಕಾಗುತ್ತಾ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಶಾಲೆಗಳ ಆರಂಭ ಮಾಡಬೇಕಾ ಬೇಡವಾ ಅನ್ನುವ ಚರ್ಚೆ ನಡೆಯುತ್ತಿದೆ. ಎಲ್ಲರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತಗೊಳ್ಳುತ್ತೆ. ನನ್ನ ವೈಯಕ್ತಿಕ ಅಭಿಪ್ರಾಯ ಸದ್ಯಕ್ಕೆ ಶಾಲೆ ಆರಂಭ ಬೇಡ ಎನ್ನುವುದಾಗಿದೆ ಎಂದರು.
PublicNext
09/10/2020 03:40 pm