ಮೋದಿ ಸರ್ಕಾರ ಕೊರೊನಾ ಸೋಂಕಿನಲ್ಲಿ ಭಾರತವನ್ನು ವಿಶ್ವದ ನಂಬರ್ 1 ದೇಶವನ್ನಾಗಿ ಮಾಡುವ ಧಾವಂತದಲ್ಲಿದ್ದರೆ, ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಸೋಂಕಿನಲ್ಲಿ ಕರ್ನಾಟಕವನ್ನು ದೇಶದ ನಂಬರ್ 1 ಮಾಡುವ ಉತ್ಸಾಹದಲ್ಲಿದ್ದಾರೆ. ಈ ಇಬ್ಬರು ನಾಯಕರು ದೇಶಕ್ಕೆ ಮತ್ತು ರಾಜ್ಯಕ್ಕೆ ಕೊರೊನಾಕ್ಕಿಂತಲೂ ಅಪಾಯಕಾರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರೊನಾ ಸೋಂಕಿನಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ತಮ್ಮ ದುರಾಡಳಿತದ ಮೂಲಕ ಮೋದಿ ಹಾಗೂ ಯಡಿಯೂರಪ್ಪ ಜೋಡಿ ದೇಶವನ್ನು ಮತ್ತು ರಾಜ್ಯವನ್ನು ಕೊರೊನಾ ಸೋಂಕಿನಲ್ಲಿ ಮೊದಲ ಸ್ಥಾನಕ್ಕೇರಿಸಲು ಪಣತೊಟ್ಟಂತಿದೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಕೊರೊನಾ ಸೋಂಕಿನಲ್ಲಿ ಕಾಂಗ್ರೆಸ್ ಪಾಲುದಾರಿಕೆಯ ಮಹಾರಾಷ್ಟ್ರ ಸರ್ಕಾರ ಮೊದಲ ಸ್ಥಾನದ ಕುಖ್ಯಾತಿ ಪಡೆದುಕೊಂಡಿದ್ದರು ಸಿದ್ದರಾಮಯ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಟೀಕೆ ಮಾಡುತ್ತಿರುವ ಬಗ್ಗೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ ನಿಮ್ಮ ಮಾತಿನ ಅರ್ಥ, ಮಹಾರಾಷ್ಟ್ರ ಸರ್ಕಾರದ ದುರಾಡಳಿತದಿಂದ ಕರೋನಾ ಕೇಸಲ್ಲಿ ಒಂದನೆ ಸ್ಥಾನ ಪಡೆದಿದ್ದಾರೆಯೇ ಎಂದು ಪ್ರಶ್ನಿಸಿದೆ. ಒಂದು ವೇಳೆ ಇದೆ ಪರಿಸ್ಥಿತಿಯಲ್ಲಿ ಅಪ್ಪಿ ತಪ್ಪಿ ಕಾಂಗ್ರೆಸ್ ಸರಕಾರ ಇದ್ದಿದ್ದರೆ ಭಾರತದ ಅರ್ಧದಷ್ಟು ಜನಸಂಖ್ಯೆ ಕಡಿಮೆಯಾಗಿರುತಿತ್ತು ಹಾಗೆಯೇ ಅಮ್ಮ ಮಗ ತಾವು ಜನಸಂಖ್ಯೆ ಕಮ್ಮಿ ಮಾಡಿದ್ದೆವೆ ಎಂದು ಭಾರತರತ್ನ ಪಡೆಯುತಿದ್ದರು ಅಲ್ಲವೆ....? ಎಂದು ಬಿಜೆಪಿ ಸಿದ್ದರಾಮಯ್ಯ ಟ್ವೀಟ್ ಗೆ ವ್ಯಂಗ್ಯ ಮಾಡಿದೆ
PublicNext
09/10/2020 05:42 pm