ಲಕ್ನೋ: ಪಕ್ಷದ ಕಾರ್ಯಕರ್ತೆ ಮೇಲೆ ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆ ನಡೆಸಿದ ಘಟನೆ ಉತ್ತರ ಪ್ರದೇಶದ ದೇವರಿಯಾ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.
ಅತ್ಯಾಚಾರ ನಡೆಸಿದ ವ್ಯಕ್ತಿಗೆ ದೇವರಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಟಿಕೆಟ್ ನೀಡಲಾಗಿದೆ ಎಂದು ಮಹಿಳಾ ಕಾರ್ಯಕರ್ತೆ ತಾರಾ ಯಾದವ್ ಆರೋಪಿಸಿದ್ದರು. ಹಲ್ಲೆ ನಡೆಸಿದ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ಸಂಬಂಧ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರು ಸಮಿತಿಯೊಂದನ್ನು ರಚಿಸಿದ್ದು ಮೂರು ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದಾರೆ. ಜೊತೆಗೆ ಇಬ್ಬರು ಕಾರ್ಯಕರ್ತರನ್ನು ಅಮಾನತು ಮಾಡಲಾಗಿದೆ.
ತಾರಾ ಅವರು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸೇರಿದಂತೆ ನಾಲ್ವರು ಪದಾಧಿಕಾರಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಿಸಿಲ್ಲ. ಈ ಕುರಿತು ತನಿಖೆ ನಡೆದಿದೆ ಎಂದು ಪೊಲೀಸ್ ಅಧಿಕಾರಿ ಕೊತ್ವಾಲಿ ಚಂದ್ರಭಾನ್ ಸಿಂಗ್ ತಿಳಿಸಿದ್ದಾರೆ.
PublicNext
11/10/2020 05:55 pm