ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚೀನಾ ಸಹಾಯದಿಂದ ಜಮ್ಮು-ಕಾಶ್ಮೀರದದಲ್ಲಿ ಮತ್ತೆ 370ನೇ ವಿಧಿ ಜಾರಿ– ಫಾರೂಕ್ ಅಬ್ದುಲ್ಲಾ

ನವದೆಹಲಿ: ಚೀನಾದ ಸಹಾಯದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಜಾರಿಗೆ ತರುವ ಆಶಯವನ್ನು ಹೊಂದಿದ್ದೇನೆ ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾದಿಂದಲೇ ಲಡಾಖ್‍ನ ವಾಸ್ತವ ಗಡಿ ರೇಖೆ (ಎಲ್‍ಎಸಿ)ಯ ಬಳಿ ಚೀನಾ ಆಕ್ರಮಣ ಮಾಡುತ್ತಿದೆ. ಅಷ್ಟೇ ಅಲ್ಲದೆ ಜಮ್ಮು-ಕಾಶ್ಮೀರ ವಿಶೇಷ ಸ್ಥಾನವ ರದ್ದತಿಯನ್ನು ಚೀನಾ ಒಪ್ಪಿಕೊಂಡಿಲ್ಲ. ಹೀಗಾಗಿ ಚೀನಾದ ಬೆಂಬಲದಿಂದಾಗಿ 370ನೇ ವಿಧಿಯನ್ನು ಮತ್ತೆ ಜಾರಿಗೆ ತರುವ ಆಶಯ ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

11/10/2020 08:57 pm

Cinque Terre

114.35 K

Cinque Terre

56

ಸಂಬಂಧಿತ ಸುದ್ದಿ