ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

‘ಕೈ’ ಗೆ ಬೈಬೈ! ಕಮಲ ಮುಡಿಯಲು ಖುಷ್ಬೂ ರೆಡಿ

ಚೆನ್ನೈ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ನಟಿ ಖುಷ್ಬೂ ಇಂದು ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮ ಪತ್ರ ರವಾನಿಸಿರುವ ಖುಷ್ಬು, ತನಗೆ ಕಾಂಗ್ರೆಸ್ ನಲ್ಲಿ ಇರಲು ಇಷ್ಟವಿಲ್ಲ ಎಂದು ಬರೆದಿದ್ದಾರೆ.

2014ರ ಚುನಾವಣೆಯಲ್ಲಿ ಸೋತರೂ ಕಾಂಗ್ರೆಸ್ ನ ಸಿದ್ಧಾಂತದಿಂದಾಗಿ ತಾನು ಪಕ್ಷಕ್ಕೆ ಸೇರ್ಪಡೆಯಾಗಿದ್ದೆ.

ಹೆಸರು, ಕೀರ್ತಿ, ಹಣದ ಆಸೆ ಇರದ ಕಾರಣ ಅಲ್ಲಿಯೇ ಮುಂದುವರೆಯಲು ಇಚ್ಛಿಸಿದ್ದೆ. ಆದರೆ ಉನ್ನತ ಸ್ಥಾನದಲ್ಲಿ ಇರುವ ಕೆಲವರಿಗೆ ರಾಜಕೀಯದ ಮೂಲವೇ ಗೊತ್ತಿಲ್ಲ.

ಉನ್ನತ ಸ್ಥಾನದಲ್ಲಿ ಇದ್ದವರು ಆಳುತ್ತಿರುವುದನ್ನು ನಾನು ನೋಡಲಾರೆ. ಆದ್ದರಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಖಷ್ಟೂ ಹೇಳಿದ್ದಾರೆ.

ಜತೆಗೆ ಇಲ್ಲಿಯವರೆಗೆ ಪಕ್ಷದಲ್ಲಿ ಸೇವೆ ಸಲ್ಲಿಸಲು ಅವಕಾಶ ಕೊಟ್ಟಿರುವುದಕ್ಕೆ ಸೋನಿಯಾ ಮತ್ತು ರಾಹುಲ್ ಗಾಂಧಿಯವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಒಂದು ಮೂಲಗಳ ಪ್ರಕಾರ ಖಷ್ಟೂ ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರನ್ನು ಭೇಟಿ ಮಾಡಿ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಎಲ್. ಮುರುಗನ್ ಅವರ ಉಪಸ್ಥಿತಿಯಲ್ಲಿ ಖುಷ್ಬು ಇಂದು ಬಿಜೆಪಿ ಹೈಕಮಾಂಡ್ ಭೇಟಿಯಾಗಲಿದ್ದು, ಅಧಿಕೃತ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

Edited By : Nirmala Aralikatti
PublicNext

PublicNext

12/10/2020 10:59 am

Cinque Terre

82.98 K

Cinque Terre

7

ಸಂಬಂಧಿತ ಸುದ್ದಿ