ಬೆಂಗಳೂರು: ಉಪ ಮುಖ್ಯಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿದ್ದ ಸಚಿವ ಬಿ. ಶ್ರೀರಾಮುಲು ಅವರಿಗೆ ಸಚಿವ ಸಂಪುಟ ಪುನಾರಚನೆ ವಿಚಾರ ಬಿಗ್ ಶಾಕ್ ಕೊಟ್ಟಿದೆ.
ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಇನ್ನು ಮುಂದೆ ಆರೋಗ್ಯ ಸಚಿವರೂ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರವಿವಾರ ಸಂಜೆ ವೈದ್ಯಕೀಯ ಶಿಕ್ಷಣ ಖಾತೆ ಜತೆಗೆ ಆರೋಗ್ಯ ಖಾತೆಯನ್ನೂ ಸುಧಾಕರ್ ಗೆ ವಹಿಸಿದ್ದಾರೆ.
ಸದ್ಯ ಸುಧಾಕರ್ ಹೆಗಲಿಗೆ ಅವಳಿ ಜವಾಬ್ದಾರಿ ಬಿದ್ದಿದ್ದು ಎರಡನ್ನು ಸಮರ್ಪಕವಾಗಿ ನಿಭಾಯಿಸುತ್ತೇನೆ ಎಂದಿದ್ದಾರೆ ಸುಧಾಕರ್
ಸರಿಯಾಗಿ ಕೋವಿಡ್-19 ನಿಯಂತ್ರಿಸಿ ರಾಜ್ಯದ ಜನತೆಗೆ ಉತ್ತಮ ಆರೋಗ್ಯ ಭಾಗ್ಯ ಸಿಗುವಂತೆ ಕ್ರಾಂತಿಕಾರಿ ಕೆಲಸ ಮಾಡುವಂತೆ ಸಿಎಂ ಸಚಿವ ಸುಧಾಕರ್ ಸೂಚಿಸಿದ್ದಾರೆ.
ಇನ್ನೂ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುಧಾಕರ್ ಮೊದಲಿಗೆ ಸಿಎಂ ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.
ಅವರ ನಂಬಿಕೆಗೆ ಚ್ಯುತಿ ಬಾರದಂತೆ ಜನತೆಗೆ ಉತ್ತಮ ಆರೋಗ್ಯ ಕಲ್ಪಿಸಲು ಶಕ್ತಿ, ಯುಕ್ತಿ ಮೀರಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಇನ್ನೂ ಈ ದೀಢಿರ್ ಬದಲಾವಣೆಯಿಂದ ಕಂಗಾಲಾದ ರಾಮುಲುಗೆ ಸಮಾಜ ಕಲ್ಯಾಣ ಇಲಾಖೆ ಜವಾಬ್ದಾರಿ ನೀಡಿದ್ದಾರೆ .
ಈಗಾಗಲೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರಾಮುಲು ಅವರ ಬಳಿ ಇರುವುದರಿಂದ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವುದರ ಮೂಲಕ ಅವರಿಗೂ ಬೇಸರವಾಗದಂತೆ ಸಿಎಂ ನೋಡಿಕೊಂಡಿದ್ದಾರೆ.
PublicNext
12/10/2020 11:25 am