ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೈ ಬಿಟ್ಟ ಖುಷ್ಬೂ ಕಮಲಕ್ಕೆ ಎಂಟ್ರಿ

ನವದೆಹಲಿ: ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ನಟಿ ಖುಷ್ಬೂ ಸುಂದರ್ ನಿರೀಕ್ಷೆಯಂತೇ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಖುಷ್ಬೂ ಪಕ್ಷಕ್ಕೆ ಸೇರ್ಪಡೆಯಾದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ, ತಮಿಳುನಾಡು ಉಸ್ತುವಾರಿ ಸಿ.ಟಿ ರವಿ ಅವರು ಖುಷ್ಬೂ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

'ದೇಶವು ಅಭಿವೃದ್ಧಿಪಥದಲ್ಲಿ ಸಾಗಲು, ಸರಿಯಾದ ದಿಕ್ಕಿನಲ್ಲಿ ದೇಶವನ್ನು ಕರೆದೊಯ್ಯಲು ನಮಗೆ ಪ್ರಧಾನಿ ನರೇಂದ್ರ ಮೋದಿಯಂಥ ವ್ಯಕ್ತಿ ಅಗತ್ಯವಿದೆ' ಎಂದು ಪಕ್ಷ ಸೇರ್ಪಡೆಯ ಬಳಿಕ ಖುಷ್ಬೂ ಪ್ರತಿಕ್ರಿಯಿಸಿದರು.

ನಂತರ, ಖಷ್ಬೂ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾದರು.

Edited By : Nirmala Aralikatti
PublicNext

PublicNext

12/10/2020 03:03 pm

Cinque Terre

80.44 K

Cinque Terre

9

ಸಂಬಂಧಿತ ಸುದ್ದಿ