ಶ್ರೀನಗರ: ಚೀನಾ ಸರ್ಕಾರದ ನೆರವು ಪಡೆದು ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿಯನ್ನು ಸ್ಥಾಪಿಸಲಾಗುವುದು ಎಂದು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಎಲ್ಲಿಯೂ ಹೇಳಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಸ್ಪಷ್ಟಪಡಿಸಿದೆ.
ಖಾಸಗಿ ಸುದ್ದಿವಾಹಿನಿಯ ಸಂದರ್ಶನವೊಂದರಲ್ಲಿ ಫಾರೂಕ್ ಅಬ್ದುಲ್ಲಾ ಅವರು ಚೀನಾ ಸರ್ಕಾರದ ಸಹಕಾರದಲ್ಲಿ ಕಣಿವೆ ರಾಜ್ಯದಲ್ಲಿ ಮತ್ತೆ 370ನೇ ವಿಧಿಯನ್ನು ಸ್ಥಾಪಿಸುವ ಬಗ್ಗೆ ಮಾತನಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಎನ್‌ಸಿ, '370ನೇ ವಿಧಿ ಅಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ತೆರವು ಮಾಡಿರುವುದರಿಂದ ಕಣಿವೆ ರಾಜ್ಯದ ಜನರಿಗೆ ಕೋಪ ಇದೆ. ಹಾಗೇ ಕೇಂದ್ರ ಸರ್ಕಾರದ ಈ ಕ್ರಮದ ಬಗ್ಗೆ ಚೀನಾಗೂ ಅಸಮಾಧಾನವಿದೆ ಎಂದು ಫಾರೂಕ್ ಅಬ್ದುಲ್ಲಾ ಸಂದರ್ಶನದಲ್ಲಿ ಹೇಳಿದ್ದರು. ಇದನ್ನು ತಿರುಚಿ ಬಿಜೆಪಿ ಆರೋಪ ಮಾಡಿದೆ' ಎಂದು ತಿಳಿಸಿದೆ.
PublicNext
13/10/2020 09:48 am