ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರ ತಾಯಿ ಥಾವುಸಾಯಮ್ಮಾಳ್ (93) ಸೋಮವಾರ ರಾತ್ರಿ ವಿಧಿವಶರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಥಾವುಸಾಯಮ್ಮಾಳ್ ಅವರನ್ನು ಶುಕ್ರವಾರ ಸೇಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ರಾತ್ರಿ 12:30ರ ಸುಮಾರಿಗೆ ಕೊನೆಯುಸಿರೆಳೆದಿದ್ದು, ಸೇಲಂ ಜಿಲ್ಲೆಯ ಎಡಪ್ಪಾಡಿ ಬಳಿಯ ಸ್ವಗ್ರಾಮ ಸಿಲುವಂಪಾಳ್ಯಂ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಮಾತೃ ವಿಯೋಗದ ಹಿನ್ನೆಲೆ ತೂತುಕುಡಿಯಲ್ಲಿ ಆಯೋಜಿಸಿದ್ದ ಎಲ್ಲಾ ಕಾರ್ಯಕ್ರಮ ಮತ್ತು ಸಭೆಗಳನ್ನು ಸಿಎಂ ಪಳನಿಸ್ವಾಮಿ ರದ್ದುಪಡಿಸಿದ್ದಾರೆ. ಸಿಎಂ ಪಳನಿಸ್ವಾಮಿ ತಾಯಿ ಅವರ ನಿಧನಕ್ಕೆ ಅನೇಕ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.
PublicNext
13/10/2020 12:24 pm